ರಾಮನಗರ: ಸಂವಿಧಾನದಂತಹ ಮೇರು ಗ್ರಂಥ ಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಪ್ರಬುದ್ಧ ಭಾರತ ನಿರ್ಮಾಣದ ಕನಸು ಕಂಡಿದ್ದರು. ಸಮಬಾಳು, ಸಮಪಾಲಿನ ಸಮ ಸಮಾಜ ನಿರ್ಮಾಣವಾದಾಗ ಮಾತ್ರ ಅವರ ಕನಸು ನನಸಾಗಿ, ಸಂವಿಧಾನದ ಆಶಯ ಈಡೇರಿದಂತಾಗುತ್ತದೆ ಎಂದು ಲೇಖಕ ಹಾಗೂ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಎಲ್ಲಾ ಜಾತಿ– ಧರ್ಮದವರಿಗೆ ಮೀಸಲಾತಿ ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಲೇ ಇದೆ. ಅಹಿಂಸಾವಾದಿಯಾಗಿದ್ದ ಅವರು ಆರ್ಥಿಕ ತಜ್ಞ, ನೀರಾವರಿ ತಜ್ಞ, ರೈತವಾದಿ, ಕಾರ್ಮಿಕವಾದಿ, ಮಹಿಳಾವಾದಿ, ಸಮಾನತವಾದಿ ಜೊತೆಗೆ ಮಹಾ ಮಾನವತಾವಾದಿಯಾಗಿದ್ದರು ಎಂದು ಬಣ್ಣಿಸಿದರು.

ಅಂಬೇಡ್ಕರ್ ಕಾರ್ಯಕ್ರಮಗಳು ಆಚರಣೆಗಳಾಗದೆ ಅನುಸರಣೆಯಾಗಬೇಕು. ಅದೇ ಅವರ ವ್ಯಕ್ತಿತ್ವಕ್ಕೆ ಸಲ್ಲಿಸುವ ನಿಜ ಗೌರವ. ಎಲ್ಲಾ ಸಮುದಾಯದವರು ಅಂಬೇಡ್ಕರ್ ಹೋರಾಟದಿಂದ ಲಾಭ ಪಡೆದಿದ್ದಾರೆ. ಆದರೆ, ಸಮ ಸಮಾಜಕ್ಕಾಗಿ ಮರಳಿ ಏನನ್ನೂ ನೀಡಿಲ್ಲ. ಆ ನಿಟ್ಟಿನಲ್ಲಿ ಸಮುದಾಯಗಳು ಚಿಂತಿಸಬೇಕಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿ, ಜ್ಞಾನವಿದ್ದರೆ ಜಗತ್ತು ನಿನಗೆ ಹೆದರುತ್ತೆ ಎಂದು ಅಂಬೇಡ್ಕರ್ ಹೇಳಿದ್ದರು. ಸಂವಿಧಾನ ರಚಿಸಿದ ಅವರು ದೇಶದ ಜನರಿಗೆ ದಾರಿ ದೀಪವಾಗಿದ್ದಾರೆ. ದೇಶದಲ್ಲಿ ಸಮಾನತೆಯ ಸಾಕಾರಕ್ಕೆ ಅವರೇ ಕಾರಣ. ದೇಶದ ಆಸ್ತಿಯಾದ ಅವರನ್ನು ಸೀಮಿತಗೊಳಿಸುವುದು ಸರಿಯಲ್ಲ ಎಂದರು.

ಜಿಬಿಡಿಎ ಅಧ್ಯಕ್ಷ ಜಿ.ಎನ್. ನಟರಾಜ್ ಗಾಣಕಲ್, ರುಡಾ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಲಾಲ್, ಡಿಸಿಎಫ್ ರಾಮಕೃಷ್ಣಪ್ಪ, ತಹಶೀಲ್ದಾರ್ ತೇಜಸ್ವಿನಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಚೆಲುವರಾಜು, ಬಾಬು ಕುಂಬಾಪುರ, ಗುರುಮೂರ್ತಿ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜ್, ಮುಖಂಡರಾದ ಜಯಪ್ರಕಾಶ್, ಗವಿಯಪ್ಪ, ಗಂಗಾಧರ್, ಗುಡ್ಡೆ ವೆಂಕಟೇಶ್ ಹಾಗೂ ಇತರರು ಇದ್ದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆ ಬೋಧಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮಹೇಶ್ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ. ಅಂಕನಹಳ್ಳಿ ಪಾರ್ಥ ನಿರೂಪಣೆ ಮಾಡಿದರು. ಅಮ್ಮ ವಸುಂಧರ ತಂಡದವರು ಅಂಬೇಡ್ಕರ್ ಗೀತ ಗಾಯನ ನಡೆಸಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-14-2144385289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.