ರಾಮನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆಗಾಗಿ ಶ್ರಮಿಸಿದರು. ಮನುಷ್ಯ ವಿರೋಧಿ ಜಾತೀಯತೆ ಮತ್ತು ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಅವರು ಎಲ್ಲರನ್ನೂ ಸಮಾನವಾಗಿ ಕಾಣುವ ಶ್ರೇಷ್ಠ ಸಂವಿಧಾನವನ್ನು ರಚಿಸಿದರು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ, ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಈ ದೇಶ ಕಂಡ ಮಹಾನ್ ನಾಯಕ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಸದೃಢ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಅಂಬೇಡ್ಕರ್ ಅವರ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಚಿಂತನೆಗಳು ದೇಶ ನಿರ್ಮಾಣಕ್ಕೆ ಬಹುದೊಡ್ಡ ಕೊಡುಗೆ ನೀಡಿವೆ. ಸಾವಿರಾರು ಜಾತಿ ಮತ್ತು ಬಹು ಧರ್ಮಗಳ ಈ ದೇಶದಲ್ಲಿ ಸಮ ಸಮಾಜ ನಿರ್ಮಾಣದೊಂದಿಗೆ ಎಲ್ಲರಿಗೂ ಘನತೆಯಿಂದ ಬದುಕುವ ಹಕ್ಕನ್ನು ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿದರು ಎಂದು ಬಣ್ಣಿಸಿದರು.

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ದಿಶಾ ಸಮಿತಿ ಸದಸ್ಯ ನರಸಿಂಹಮೂರ್ತಿ, ಜಯಕುಮಾರ್, ವಕೀಲ ವಿನೋದ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-14-1654233511

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.