ರಾಮನಗರ: ‘ಅಂಬೇಡ್ಕರ್ ವಿಷಯದಲ್ಲಿ ವ್ಯಕ್ತಿಪೂಜೆ ಮತ್ತು ಮೆರವಣಿಗೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಸ್ವತಃ ಬಾಬಾ ಸಾಹೇಬರೇ ವ್ಯಕ್ತಿಪೂಜೆ ವಿರೋಧಿಸಿದ್ದರು. ಅಂಬೇಡ್ಕರ್ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಅವರ ಆಶಯದಂತೆ ಬದುಕುವ ಮೂಲಕ ಗೌರವ ಸಲ್ಲಿಸಬೇಕು’ ಎಂದು ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್ ಕಿವಿಮಾತು ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ, ಅಕ್ಷರೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬುದ್ದನ ಅನುಯಾಯಿಯಾಗಿದ್ದ ಅಂಬೇಡ್ಕರ್, ಪಂಚಶೀಲ ತತ್ವಗಳನ್ನು ಅಳವಡಿಸಿಕೊಂಡಿದ್ದರು. ವಿದ್ಯೆಯಷ್ಟೇ ತಮ್ಮ ನಡವಳಿಕೆಗೂ ಮಹತ್ವ ಕೊಟ್ಟಿದ್ದರು’ ಎಂದರು.

‘ನ್ಯಾಯಾಂಗದಲ್ಲಿ ಪರಿಶಿಷ್ಟ ಸಮುದಾಯದವರ ಪ್ರಾತಿನಿಧ್ಯ ಕೇವಲ ಶೇ 1ರಷ್ಟಿದೆ. ಐಎಎಸ್, ಐಪಿಎಸ್ನಂತಹ ಲೋಕಸೇವಾ ಹುದ್ದೆಗಳಲ್ಲಿ ಶೇ 22.5 ಮೀಸಲಾತಿ ಇದ್ದರೂ ಶೇ 2.75ರಷ್ಟಿದೆ. ಸಮುದಾಯದ ವಿದ್ಯಾರ್ಥಿಗಳಿಗೆ ದೇಶದ ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಉನ್ನತ ಸ್ಥಾನಗಳನ್ನು ದಕ್ಕಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಆ ದಿಕ್ಕಿನಲ್ಲಿ ವಿದ್ಯಾರ್ಥಿಗಳು ಗಮನ ಹರಿಸಬೇಕು’ ಎಂದರು.

‘ಅಂಬೇಡ್ಕರ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜ್ಞಾನಾರ್ಜನೆಗಾಗಿ 12 ಗಂಟೆ ಮೀಸಲಿಟ್ಟಿದ್ದರು. ಇಂದಿನ ಯುವಜನರು ಕನಿಷ್ಠ 6 ಗಂಟೆಯಾದರೂ ಮೀಸಲಿಡಬೇಕು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಲಾಹರಣ ಬಿಡಬೇಕು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದು, ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ ತಾನು ಬಂದ ಸಮುದಾಯದ ಪ್ರಗತಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಪೂರ್ತಿಧಾಮ ಬುದ್ದವಿಹಾರದ ಬಿಕ್ಕು ಧಮ್ಮವೀರ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎಂ.ಸಿ. ನಾರಾಯಣ್ ಅಧ್ಯಕ್ಷತೆ ವಹಿಸಿದ್ದರು.

ನಗರಸಭೆ ಸದಸ್ಯ ಮುತ್ತುರಾಜ್, ಸಂವಿಧಾನ ಬಳಗದ ರಾಜ್ಯಾಧ್ಯಕ್ಷ ಜಯಕಾಂತ್ ಚಾಲುಕ್ಯ, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರಸ್ವಾಮಿ, ಸರ್ಕಾರಿ ಎಸ್ಸಿ–ಎಸ್ಟಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಎನ್. ಜಯಪ್ರಕಾಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಗವಿಯಯ್ಯ, ಮುಖಂಡರಾದ ಶಿವಶಂಕರ್, ಕೆಂಗಲಯ್ಯ, ಹನುಮಂತಯ್ಯ, ವೆಂಕಟೇಶ್, ದೊರೆಸ್ವಾಮಿ, ಶಿವಣ್ಣ, ನಂಜುಂಡಯ್ಯ, ಅಶೋಕ್, ಶ್ರೀನಿವಾಸ್ , ಗೌತಮ್, ವೆಂಕಟೇಶ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-658820062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.