ರಾಮನಗರ: ‘ಜಿಲ್ಲಾ ಕೇಂದ್ರವಾದ ರಾಮನಗರದ ಹೃದಯ ಭಾಗದಲ್ಲಿ ಅರ್ಕೇಶ್ವರ ದೇವಸ್ಥಾನ, ಪಿರಾನ್ ಷಾ ವಲಿ ದರ್ಗಾ, ವಸತಿ ಪ್ರದೇಶವನ್ನು ಲೆಕ್ಕಿಸದೆ ಅರ್ಕಾವತಿ ನದಿ ದಂಡೆ ಅಭಿವೃದ್ದಿ ಯೋಜನೆ ಅನುಷ್ಠಾನಕ್ಕೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುದರ ಹಿಂದೆ ಸ್ಥಳೀಯ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರ ಸ್ವ ಹಿತಾಸಕ್ತಿ ಅಡಗಿದೆ’ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಸಲಹೆಗಾರ ಕುಮಾರಸ್ವಾಮಿ ಆರೋಪಿಸಿದರು.

‘ಸುಮಾರು ₹150 ಕೋಟಿ ವೆಚ್ಚದ ಯೋಜನೆಗೆ ನದಿಯ ಬಫರ್ ವಲಯ ಸೇರಿದಂತೆ ಅದಕ್ಕೆ ಹೊಂದಿಕೊಂಡಿರುವ ಶಾಸಕರ ಜಾಗವೂ ಸ್ವಾಧೀನವಾಗಲಿದೆ. ಅದರ ಸ್ವಾಧೀನದಿಂದ ಶಾಸಕರಿಗೆ ಅಂದಾಜು ₹27 ಕೋಟಿ ಪರಿಹಾರ ಸಿಗಲಿದೆ. ಅಲ್ಲದೆ, ಉಳಿದ ಆಸ್ತಿಯ ಮೌಲ್ಯ ಹೆಚ್ಚಿಸಿಕೊಂಡು ಲಾಭ ಮಾಡಿಕೊಳ್ಳಲು ಶಾಸಕರು ಮುಂದಾಗಿದ್ದಾರೆ’ ಎಂದು ರೈತ ಭವನದಲ್ಲಿ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಈಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಶಾಸಕರ ಕೈಗೊಂಬೆಯಾಗಿರುವ ಜಿಲ್ಲಾಧಿಕಾರಿ ಅವರು ಯೋಜನೆಯ ಸಾಧಕ–ಬಾಧಕ ಗಮನಿಸದೆ ಅಧಿಸೂಚನೆ ಹೊರಡಿಸಿದ್ದಾರೆ. ಸ್ವಾಧೀನವಾಗಲಿರುವ ದೇವಸ್ಥಾನ, ದರ್ಗಾ, ಸಾಯಿಬಾಬಾ ದೇವಸ್ಥಾನಗಳ ಸಮಿತಿ ಸೇರಿದಂತೆ ರಾಘವೇಂದ್ರ ಕಾಲೊನಿ ನಿವಾಸಿಗಳ ಜೊತೆ ಸಭೆ ನಡೆಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅಧಿಸೂಚನೆಗೆ ವಿರೋಧ ವ್ಯಕ್ತವಾ ಗುತ್ತಿದ್ದಂತೆ, ದೇಗುಲ ಮತ್ತು ದರ್ಗಾ ಜಾಗ ಕೈ ಬಿಡುವುದಾಗಿ ಶಾಸಕರು ಹೇಳುತ್ತಿದ್ದಾರೆ. ಆದರೆ, ಅಧಿಸೂಚನೆ ಯಾದ ಜಮೀನನ್ನು ಸುಲಭವಾಗಿ ಕೈ ಬಿಟ್ಟ ನಿದರ್ಶನ ತೀರಾ ಕಡಿಮೆ. ನಡಿಗೆ ಪಥ ಮತ್ತು ಉದ್ಯಾನಕ್ಕಾಗಿ ಶಾಸಕರು ಜನರ ಬದುಕಿನ ಜೊತೆ ಆಟವಾಡದೆ ಕೂಡಲೇ ಅಧಿಸೂಚನೆ ರದ್ದುಪಡಿಸಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು’ ಎಂದರು.

ರೈತ ಸಂಘದ ಯುವ ಘಟಕದ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿ, ‘ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯೋಜನೆ ಜಾರಿಗೆ ಮುಂದಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೇಗುಲ, ದರ್ಗಾ, ವಸತಿ ಪ್ರದೇಶದ ಜಾಗದಲ್ಲಿ ಉದ್ಯಾನ ನಿರ್ಮಿಸುವ ಅಗತ್ಯವೇನಿದೆ? ಬೇಕಿದ್ದರೆ, ಬೇರೆ ಜಾಗದಲ್ಲಿ ಯೋಜನೆ ಅನುಷ್ಠಾನಗೊ ಳಿಸಲಿ’ ಎಂದು ಹೇಳಿದರು.

‘ಜಿಲ್ಲೆಯ ಕಂದಾಯ ಇಲಾಖೆಯು ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಧಿಕಾರಿಗಳು ಹಲವು ವರ್ಷಗಳಿಂದ ಒಂದೇ ಜಾಗದಲ್ಲಿ ಬೀಡು ಬಿಟ್ಟಿದ್ದಾರೆ. ಅವರೇ ಭ್ರಷ್ಟಾಚಾರದ ಬೇರುಗಳಾಗಿದ್ದಾರೆ. ಅಂತಹ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ತಾಲ್ಲೂಕು ಮಟ್ಟದಲ್ಲಿ ರೈತ ಸಂಘದಿಂದ ಬಾರುಕೋಲು ಚಳವಳಿ ನಡೆಸಲಾಗುವುದು’ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಯ್ಯ, ಕಾರ್ಯಾಧ್ಯಕ್ಷ ನಾಗರಾಜು, ಪುಟ್ಟಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ರಮ್ಯ ರಾಮಣ್ಣ, ವಿಜಯಕುಮಾರ್, ಜಾಲಮಂಗಲ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-14-964692594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.