ರಾಮನಗರ: ‘ಈ ದೇಶದಲ್ಲಿರುವ ಕಾರ್ಮಿಕ ಕಾನೂನುಗಳ ಹಿಂದೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಶ್ರಮವಿದೆ. ಇಂದು ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳಿಗೆ ಅವರೇ ಕಾರಣ. ಅವರು ಹೊಂದಿದ್ದ ಕಾರ್ಮಿಕರ ಕಲ್ಯಾಣದ ಆಶಯದೊಂದಿಗೆ ನಗರಸಭೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಜೀವವಿಮೆ ನೀಡಲು ಮುಂದಾಗಿದೆ’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹೇಳಿದರು.

ನಗರದ ಎಸ್ಪಿ ಕಚೇರಿ ವೃತ್ತದಲ್ಲಿ ಜೈ ಭೀಮ್ ಆಟೊ ಚಾಲಕರ ಮತ್ತು ಮಾಲೀಕರ ಸಂಘ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಗರದಲ್ಲಿರುವ ಸುಮಾರು 17 ಸಾವಿರ ಅಸಂಘಟಿತ ಕಾರ್ಮಿಕರಿಗೆ ವಿಮೆ ಭಾಗ್ಯ ಸಿಗಲಿದೆ. ಆ ನಿಟ್ಟಿನಲ್ಲಿ ಈಗಾಗಲೇ ಕಾರ್ಮಿಕರ ಸಮೀಕ್ಷೆ ಆರಂಭಿಸಲಾಗಿದೆ’ ಎಂದು ತಿಳಿಸಿದರು.

‘ಅಂಬೇಡ್ಕರ್ ಅವರು ಮಹಾನ್ ಚಿಕಿತ್ಸಕ. ದೇಶದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆ, ಜಾತೀಯತೆ ಸೇರಿದಂತೆ ವಿವಿಧ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಲು ತಮ್ಮ ಜೀವನ ಪರ್ಯಂತ ಶ್ರಮಿಸಿದರು. ದೇಶ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು’ ಎಂದರು.

‘ಜಾತಿ ಮತ್ತು ಧರ್ಮದ ಅಸಮಾನತೆ ಇಲ್ಲದೆ ಸಂವಿಧಾನದ ಮೂಲಕ, ಸರ್ವರಿಗೂ ಸಮಪಾಲು ಸಮಬಾಳ್ವೆ ಕಲ್ಪಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ನಾಯಕನ ಜೀವನ ತತ್ವಗಳನ್ನು ನಾವು ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಕೊಡುವ ನಿಜವಾದ ಗೌರವ. ಆಗ ಮಾತ್ರ ಸಮ ಸಮಾಜ ನಿರ್ಮಾಣವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಪ್ರಯುಕ್ತ ಸಂಘದ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಜರುಗಿತು. ನಗರಸಭೆ ಸದಸ್ಯ ಗ್ಯಾಬ್ರಿಯಲ್, ಟಿಎಪಿಸಿಎಂಎಸ್ ಅಧ್ಯಕ್ಷ ದೊಡ್ಡಿ ಸುರೇಶ್, ಸಂಘದ ಅಧ್ಯಕ್ಷ ಜಯರಾಮ್, ಗೌರವಾಧ್ಯಕ್ಷ ಸಿ.ಎನ್.ಟಿ. ರಾಜು, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು, ಮುಖಂಡ ಪ್ರದೀಪ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-14-846678120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.