ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು: ಗ್ರಾಮ ಪಂಚಾಯಿತಿಯಲ್ಲಿ ಆಯುಧ ಪೂಜೆ

Published 25 ಅಕ್ಟೋಬರ್ 2023, 6:40 IST
Last Updated 25 ಅಕ್ಟೋಬರ್ 2023, 6:40 IST
ಅಕ್ಷರ ಗಾತ್ರ

ಕುದೂರು: ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಸಡಗರ ಸಂಭ್ರಮದಿಂದ ಆಯುಧ ಪೂಜೆಯನ್ನು ಆಚರಿಸಲಾಯಿತು.

ಕಚೇರಿ ಸಭಾಂಗಣದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.

ಹಬ್ಬದ ಅಂಗವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ವಿದ್ಯುತ್ ಅಲಂಕಾರ ಮಾಡಿ, ಹೂವು ಬಾಳೆಕಂದು ಕಟ್ಟಿ, ರಂಗೋಲಿ ಬಿಡಿಸಿ ಶೃಂಗರಿಸಲಾಗಿತ್ತು. ಪಂಚಾಯಿತಿ ವಾಹನಗಳನ್ನು ಸ್ವಚ್ಛಗೊಳಿಸಿ ಹೂಗಳಿಂದ ಅಲಂಕರಿಸಲಾಗಿತ್ತು. ಪೌರಕಾರ್ಮಿಕರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಸಿಹಿ ಹಾಗೂ ಹೊಸ ವಸ್ತ್ರಗಳನ್ನು ವಿತರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾ, ಉಪಾಧ್ಯಕ್ಷೆ ರಮ್ಯಾ ಜ್ಯೋತಿ, ಪಿಡಿಒ ವೆಂಕಟೇಶ್, ಪಂಚಾಯಿತಿ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT