ರಾಮನಗರ: ನಾಡು ಕಂಡ ಅಪರೂಪದ ರಾಜಕಾರಣಿಯಾದ ಮಾಜಿ ಸಚಿವ ಬಿ. ಬಸವಲಿಂಗಪ್ಪ ಕ್ರಾಂತಿಕಾರಕ ಬದಲಾವಣೆಗಳಿಗೆ ಮುನ್ನುಡಿ ಬರೆದರು. ಕನ್ನಡ ಸಾಹಿತ್ಯದಲ್ಲಿ ವೈಚಾರಿಕ ಚಿಂತನೆ ಬೀಜ ಬಿತ್ತುವ ಮೂಲಕ ಸಾಹಿತ್ಯವನ್ನು ಮತ್ತೊಂದು ಮಗ್ಗಲಿನಿಂದ ನೋಡುವಂತೆ ಮಾಡಿದರು ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಬಣ್ಣಿಸಿದರು.

ನಗರಸಭೆ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಸಚಿವ ಬಿ. ಬಸವಲಿಂಗಪ್ಪ ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲೇ ಮೊದಲ ಬಾರಿಗೆ ಮಲಹೊರುವ ಪದ್ದತಿಯನ್ನು ಕಾನೂನು ಮೂಲಕ ನಿಷೇಧ ಪದ್ಧತಿ ಜಾರಿಗೆ ತಂದ ಕೀರ್ತಿ ಬಸವಲಿಂಗಪ್ಪ ಅವರದ್ದು ಎಂದರು.

ಶಿಸ್ತಿನ ಸಿಪಾಯಿಯಾಗಿದ್ದ ಬಸವಲಿಂಗಪ್ಪ ಅವರು ನಿಜವಾದ ಪ್ರಜಾಪ್ರಭುತ್ವವಾದಿಯಾಗಿದ್ದರು. ಬಸವಣ್ಣನವರ ಅನುಯಾಯಿಗಳಾಗಿದ್ದ ಅವರು ಕನ್ನಡ ಸಾಹಿತ್ಯದಲ್ಲಿದ್ದ ತಾರತಮ್ಯದ ಕುರಿತು ಬೂಸಾ ಸಾಹಿತ್ಯ ಎನ್ನುವ ಮೂಲಕ ನಿಷ್ಠುರವಾಗಿ ಟೀಕಿಸಿದ್ದರು. ಇದರಿಂದ ಅವರು ಅಧಿಕಾರ ಕಳೆದುಕೊಂಡರೂ, ಅವರ ಮಾತು ಮುಂದೆ ಹೊಸ ಚಿಂತನೆಗಳಿಗೆ ಎಡೆ ಮಾಡಿಕೊಟ್ಟಿತು ಎಂದು ಹೇಳಿದರು.

ಪೌರಾಯುಕ್ತ ಡಾ. ಜಯಣ್ಣ ಮಾತನಾಡಿ, ಬಸವಲಿಂಗಪ್ಪ ಅವರು ಪೌರಾಡಳಿತ ಮತ್ತು ವಸತಿ ಸಚಿವರಾಗಿ ಜನೋಪಯೋಗಿ ಕೆಲಸಗಳನ್ನು ಮಾಡಿದ್ದಾರೆ. ವಸತಿ ಸಚಿವರಾಗಿ ಗ್ರಾಮೀಣ ಪ್ರದೇಶದ ಬಡವರಿಗೆ ಸಾವಿರಾರು ಮನೆಗಳನ್ನು ನಿರ್ಮಿಸಿ ಕೊಟ್ಟರು. ಕರ್ನಾಟಕ ಏಕೀಕರಣದ ಹೋರಾಟದಲ್ಲೂ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ನೆನೆದರು.

ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರ ಸ್ವಾಮಿ, ಅಂಬೇಡ್ಕರ್ ಅನುಯಾಯಿಯಾಗಿದ್ದ ಬಸವಲಿಂಗಪ್ಪ ಅವರು, ಜೀವನದಲ್ಲಿ ಶಿಸ್ತು ಮತ್ತು ಸಂಯಮ ಅಳವಡಿಸಿಕೊಂಡಿದ್ದರು. ಕನ್ನಡ ಸಾಹಿತ್ಯವನ್ನು ಬೂಸಾ ಸಾಹಿತ್ಯ ಎಂದು ಕರೆದ ಅವರ ವಿರುದ್ಧ ದೊಡ್ಡ ಪ್ರತಿಭಟನೆ ವ್ಯಕ್ತವಾದರೂ ತಮ್ಮ ಹೇಳಿಕೆ ಹಿಂಪಡೆಯಲಿಲ್ಲ. ಯಾವುದೇ ರಾಜಿ ಮಾಡಿಕೊಳ್ಳದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು ಎಂದರು.

ನಗರಸಭೆ ಸದಸ್ಯ ಸೋಮಶೇಖರ್ ಮಣಿ, ಅಜ್ಮತ್ ಉಲ್ಲಾ ಖಾನ್, ಎಇಇ ವಿಶ್ವನಾಥ್, ಕಂದಾಯ ನಿರೀಕ್ಷಕ ಆರ್. ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-14-1329780751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.