ರಾಮನಗರ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರಾಮನಗರ ಜಿಲ್ಲಾ ಬೀಡಿ ಕಾರ್ಮಿಕರ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು. ಆಂಜನೇಯ ಗೋಪುರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಸಿದ ಕಾರ್ಮಿಕರು, ತಮ್ಮ ಬೇಡಿಕೆಗಳ ಕುರಿತು ಘೋಷಣೆ ಕೂಗಿದರು.

ಕಾರ್ಮಿಕರಿಗೆ ವಸತಿ, ಕನಿಷ್ಠ ವೇತನ, ಒಂದು ಸಾವಿರ ಬೀಡಿ ಕಟ್ಟಿದರೆ ₹350 ಗೌರವಧನ ನೇರವಾಗಿ ಕಾರ್ಮಿಕರಿಗೆ ಸಿಗುವಂತಾಗಬೇಕು. ನೋಂದಾಯಿತ ಮತ್ತು ನೋಂದಾಯಿತ ಅಲ್ಲದ ಬೀಡಿ ಕಾರ್ಮಿಕರ ಸಮಗ್ರ ಸಮೀಕ್ಷೆ ನಡೆಸಿ ಅರ್ಹರಿಗೆ ಗುರುತಿನ ಚೀಟಿ ವಿತರಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.

ಆರೋಗ್ಯ ಸುರಕ್ಷತೆ, ಪಿಂಚಣಿ, ವಿದ್ಯಾರ್ಥಿವೇತನ, ವಿಮೆಯಂತಹ ಸಾಮಾಜಿಕ ಭದ್ರತಾ ಸೌಲಭ್ಯಗಳು ಕಾರ್ಮಿಕರಿಗೆ ಸುಲಭವಾಗಿ ದೊರೆಯುವಂತಾಗಬೇಕು. ಮಹಿಳಾಕಾರ್ಮಿಕರಿಗೆ ವಿಶೇಷ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಶೋಷಣೆ, ಅವಮಾನ ಮತ್ತು ವೇತನ ತಾರತಮ್ಯ ತಡೆಗೆ ವಿಶೇಷ ದೂರು ಪರಿಹಾರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು.

ಬೀಡಿ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರಗಳನ್ನು ನಿಯಮಿತವಾಗಿ ಆಯೋಜಿಸಬೇಕು. ಧೂಳು ಮತ್ತು ತಂಬಾಕು ಸಂಬಂಧಿತ ಅನಾರೋಗ್ಯಗಳಿಂದ ಬಳಲುವ ಕಾರ್ಮಿಕರಿಗೆ ಉಚಿತ ಚಿಕಿತ್ಸಾ ಸೌಲಭ್ಯ ಹಾಗೂ ಔಷಧ ವಿತರಣೆ ಮಾಡಬೇಕು. ಕಾರ್ಮಿಕರಿಗೆ ಪಿಎಫ್, ಇಎಸ್ಐ ಹಾಗೂ ಇತರ ಕಾನೂನುಬದ್ಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದರು.

ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳನ್ನು ತಪ್ಪಿಸುವ ಗುತ್ತಿಗೆದಾರರು ಮತ್ತು ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಉದ್ಯೋಗ ಭದ್ರತೆ ಒದಗಿಸಬೇಕು. ಕೆಲಸದ ಕೊರತೆ ಹಾಗೂ ಮಧ್ಯವರ್ತಿಗಳ ದೌರ್ಜನ್ಯದಿಂದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಮಿಕರ ಕುಂದುಕೊರತೆ ಕುರಿತಾಗಿ ಕಾರ್ಮಿಕ ಇಲಾಖೆ ಮಧ್ಯಸ್ಥಿಕೆಯಲ್ಲಿ ಮಾಲೀಕರ ಮತ್ತು ಕಾರ್ಮಿಕ ಮುಖಂಡರನ್ನು ಒಳಗೊಂಡು ಜಂಟಿ ಸಭೆ ಏರ್ಪಡಿಸಬೇಕು ಎಂದು ಒತ್ತಾಯಿಸಿದರು.

ಕಾಲಕಾಲಕ್ಕೆ ಕಾರ್ಮಿಕರ ಸಮಸ್ಯೆಗಳನ್ನು ತ್ವರಿತವಾಗಿ ಆಲಿಸಿ ಪರಿಹರಿಸುವ ವ್ಯವಸ್ಥೆ ರೂಪಿಸಬೇಕು. ಬೀಡಿ ಕಾಲೊನಿ ಪ್ರದೇಶದಲ್ಲಿ ನೈಜ ಕಾರ್ಮಿಕರಲ್ಲದವರಿಗೆ ವಿತರಿಸಿರುವ ವಸತಿಗಳನ್ನು ಹಿಂಪಡೆದು, ವಸತಿ ರಹಿತ ಬೀಡಿ ಕಾರ್ಮಿಕರಿಗೆ ವಿತರಣೆ ಮಾಡಬೇಕು. ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಿದ್ಯಾರ್ಥಿವೇತನ ನೀಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ಕಾರ್ಮಿಕ ಇಲಾಖೆ ಅಧಿಕಾರಿ ಕಾವೇರಿ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಸ್ಪಂದನ ಸಂಘಟನೆಯ ಕಾರ್ಯದರ್ಶಿ ಮಾಲಿನಿ ಅಂತರ್ಜನಂ, ಬೀಡಿ ಕಾರ್ಮಿಕರ ಮುಖಂಡ ಮುನಾಫ್, ಕಾರ್ಮಿಕ ಮುಖಂಡ ರಾಘವೇಂದ್ರ, ಮಂಗಳೂರು ವಿಜಯ್, ಅಶ್ವಥ, ಕಾವ್ಯ, ಶ್ರೀನಿವಾಸ್,ಫಾರ್ಹನ್, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-14-700991660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.