ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ಮಾರ್ಗದ ಎರಡೂ ಬದಿ ಘನತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 275 ಎಕ್ಸ್ಪ್ರೆಸ್ ಹೆದ್ದಾರಿ ಮತ್ತು ಅದರ ಸರ್ವಿಸ್ ರಸ್ತೆಗಳ ಬದಿಯಲ್ಲಿ ಸಾಕಷ್ಟು ಘನತ್ಯಾಜ್ಯ ಕಂಡು ಬರುತ್ತಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿ ಅಪಘಾತಗಳು ಸಂಭವಿಸಬಹುದು. ಸವಾರರ ಸುರಕ್ಷತೆಗಾಗಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸಬೇಕು. ಸ್ವಚ್ಛತೆ ಕಾಪಾಡದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಕ್ಸ್ಪ್ರೆಸ್ ಹೆದ್ದಾರಿ ಸೇತುವೆ, ಅಂಡರ್ಪಾಸ್ ಮತ್ತು ಸರ್ವಿಸ್ ರಸ್ತೆಗಳಲ್ಲಿ ಘನತ್ಯಾಜ್ಯ ಕಂಡು ಬರುತ್ತಿದೆ. ಅದನ್ನು ಸೂಕ್ತವಾಗಿ ವಿಲೇವಾರಿ ಮಾಡುತ್ತಿಲ್ಲ. ಹೆದ್ದಾರಿ ಕೆಲವು ಕಡೆ ಕಬ್ಬಿಣದ ಮೆಶ್ ಬೇಲಿ ಕತ್ತರಿಸಲಾಗಿದೆ. ಅದನ್ನು ಸಮರ್ಪಕವಾಗಿ ನಿರ್ವಹಿಸಬೇಕು.

ಹೆದ್ದಾರಿ ವಿವಿಧೆಡೆ ಬಲ್ಪ್ಗಳ ಕಳ್ಳತನ ತಡೆಗಟ್ಟಲು ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮತ್ತು ಸರ್ವಿಸ್ ರಸ್ತೆಯಲ್ಲಿ ನಿಷೇಧಿತ ಸ್ಥಳ, ನೋ ಪಾರ್ಕಿಂಗ್ ಮುಂತಾದ ಸೂಚನಾ ಫಲಕಗಳು ಮತ್ತು ಅಂಡರ್ಪಾಸ್ ಬಳಿ ಸಿಗ್ನಲ್ ಬೋರ್ಡ್ ಅಳವಡಿಸಿ ಪ್ರಯಾಣಿಕರಿಗೆ ಅರಿವು ಮೂಡಿಸಬೇಕು. ಹೆದ್ದಾರಿ ಆಗಮನ ಮತ್ತು ನಿರ್ಗಮನದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆಯೊಂದಿಗೆ ಸಿಸಿಟಿವಿ ಅಳವಡಿಸಬೇಕು ಎಂದು ಸೂಚಿಸಿದರು.

ಕುಂಬಳಗೂಡಿನಿಂದ ನಿಡಘಟ್ಟ ನಡುವೆ ಎರಡು ಹೆದ್ದಾರಿ ಪೆಟ್ರೋಲ್ ವಾಹನಗಳು ಗಸ್ತು ತಿರುಗುತ್ತಿವೆ. ಇದರ ಜತೆಗೆ ಇನ್ನೆರಡು ವಾಹನಗಳನ್ನು ಗಸ್ತಿಗೆ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಸಂಸ್ಥೆಯವರು ತಮ್ಮ ವಾಹನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಗಸ್ತು ನಿರ್ವಹಿಸಿದರೆ ಅಪರಾಧ ಚಟುವಟಿಕೆ ನಿಗಾವಹಿಸಬಹುದು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲಾ ಮತ್ತು ತಾಲ್ಲೂಕು ಮುಖ್ಯ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವ್ಯವಸ್ಥಾಪಕಿ ಚಾರುಲತಾ, ಡಿವೈಎಸ್ಪಿ ರಾಮಚಂದ್ರಯ್ಯ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-14-1288053489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.