ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ರೈತರು 443ನೇ ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬೆಂಬಲಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ ಜೂನ್ 6ರಂದು ಬಿಡದಿ-ಬೈರಮಂಗಲ ಚಲೋ ಬೃಹತ್ ಬೈಕ್ ಹಾಗೂ ಕಾರ್ ರ್ಯಾಲಿ ಆಯೋಜಿಸಲಾಗಿದೆ ಎಂದು ಪಕ್ಷ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಎಲ್. ಜೀವನ್ ಹೇಳಿದರು.

ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಈ ರ್ಯಾಲಿ ನಡೆಯಲಿದೆ. ಬಿಡದಿಯಿಂದ ಪ್ರಾರಂಭವಾಗುವ ರ್ಯಾಲಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಸಂಚರಿಸಿ ರೈತರಿಗೆ ನೈತಿಕ ಬೆಂಬಲ ನೀಡಲಿದೆ ಎಂದು ನಗರದ ಚೈತ್ಯನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ರೈತರು ಭಾಗವಹಿಸಲಿದ್ದಾರೆ. ನಾಡಿನ ಅನ್ನದಾತರ ಭೂಮಿಯನ್ನು ಉಳಿಸುವ ಈ ಬೃಹತ್ ಹೋರಾಟ ಕೇವಲ ಆ ಭಾಗದ ರೈತರದ್ದಲ್ಲ, ಇಡೀ ನಾಡಿನ ಜನರದ್ದಾಗಿದೆ. ಆದ್ದರಿಂದ, ಅನ್ನದಾತರ ಬೆನ್ನಿಗೆ ನಿಲ್ಲಲು ರಾಜ್ಯದ ಎಲ್ಲಾ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಪ್ರಜ್ಞಾವಂತ ನಾಗರಿಕರು ಪಕ್ಷಾತೀತವಾಗಿ ಬೆಂಬಲ ಸೂಚಿಸಬೇಕು’ ಎಂದು ಮನವಿ ಮಾಡಿದರು.

‘ರೈತ ವಿರೋಧಿಯಾಗಿರುವ ಹಾಗೂ ಸಾವಿರಾರು ಎಕರೆ ಕೃಷಿ ಮತ್ತು ತೋಟಗಾರಿಕೆ ಪ್ರದೇಶಕ್ಕೆ ಕಂಟಕಆಗಲಿರುವ ಟೌನ್ಶಿಪ್ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಸ್ವಾವಲಂಬಿಯಾಗಿ ಬದುಕುತ್ತಿರುವ ರೈತರನ್ನು ಹಾಗೂ ಕೃಷಿ ಭೂಮಿಯನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದರು.

ಯೋಜನಾ ಪ್ರದೇಶದ ರೈತ ಕೃಷ್ಣಮೂರ್ತಿ, ಪಕ್ಷದ ಜಿಲ್ಲಾಧ್ಯಕ್ಷ ಗಂಗಾಧರ್ ಹಾಗೂ ತಾಲ್ಲೂಕು ಅಧ್ಯಕ್ಷ ಮುಸಾದಿಕ್ ಪಾಷ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-14-530656065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.