ರಾಮನಗರ: ತಾಲ್ಲೂಕಿನ ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಿಂದ (ಜಿಬಿಡಿಎ) ಅನುಷ್ಠಾನಗೊಳ್ಳುತ್ತಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯೋಜನೆ ಪರವಾಗಿರುವ ರೈತರ ನಿಯೋಗವು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದೆ.

ಯೋಜನಾ ಪ್ರದೇಶದ ವ್ಯಾಪ್ತಿಯ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂಬತ್ತು ಗ್ರಾಮಗಳ ರೈತರ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

‘ನಮ್ಮ ಭಾಗದ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಹಾಗಾಗಿ, ಗೊಂದಲಕ್ಕೆ ಅವಕಾಶ ನೀಡದೆ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದು ನಿಯೋಗ ಆಗ್ರಹಿಸಿತು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ನಿಯೋಗದ ಎಚ್.ಸಿ. ರಾಜಣ್ಣ, ಎರಡು ದಶಕದಿಂದ ನನೆಗುದಿಗೆ ಬಿದ್ದಿದ್ದ ಯೋಜನೆಯಿಂದಾಗಿ ಇಡೀ ಪ್ರದೇಶವು ಕೆಂಪು ವಲಯಕ್ಕೆ ಸೇರಿ, ಅಭಿವೃದ್ಧಿಯಿಂದ ವಂಚಿತವಾಗಿದೆ. ಮುಂದೆಯೂ ಅಂತಹದ್ದೇ ಸ್ಥಿತಿ ಮುಂದುವರಿಯುವುದು ಬೇಡ. ಜಿಬಿಐಟಿ ಯೋಜನೆಯಿಂದಾಗಿ ಈ ಭಾಗದ ಅಭಿವೃದ್ದಿಯ ಬಾಗಿಲು ತೆರೆಯಲಿದೆ ಎಂದು ಹೇಳಿದರು.

ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಇನ್ನು ವಿಳಂಬ ಮಾಡುವುದು ಸರಿಯಲ್ಲ. ಯೋಜನೆಗೆ ಬಹುತೇಕ ರೈತರು ಒಪ್ಪಿಗೆ ನೀಡಿದ್ದಾರೆ. ಹಾಗಾಗಿ, ಅಂತಿಮ ಅಧಿಸೂಚನೆಯನ್ನು ಹೊರಡಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಬೇಗನೆ ಮುಗಿಸಬೇಕು. ಜಮೀನು ನೀಡುವವರಿಗೆ ಸೂಕ್ತ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಹಂಚಬೇಕು. ತಡ ಮಾಡಿದರೆ ನಾವೂ ಸಹ ಹೋರಾಟ ಮಾಡಬೇಕಾಗುತ್ತದೆ ಎಂದರು.

ಕೈಗಾರಿಕಾ ಪ್ರದೇಶದ ಅಕ್ಕಪಕ್ಕವಿದ್ದರೂ ನಮ್ಮ ಗ್ರಾಮಗಳು ಎರಡು ದಶಕಗಳಿಂದ ಅಭಿವೃದ್ದಿ ಕಂಡಿಲ್ಲ. ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಪೆಟ್ರೋಲ್ ಬಂಕ್ ಇಲ್ಲ. ಬೆಂಗಳೂರು ಪಕ್ಕವಿದ್ದರೂ ಕನಿಷ್ಠ ಮೂಲಸೌಕರ್ಯಗಳಿಲ್ಲದೆ ಬದುಕುತ್ತಿದ್ದೇನೆ. ಜಿಬಿಐಟಿ ನಿರ್ಮಾಣದಿಂದ ಎರಡು ದಶಕಗಳ ವನವಾಸಕ್ಕೆ ಮುಕ್ತಿ ಸಿಗಲಿದೆ ಎಂದು ನಿಯೋಗದ ಸದಸ್ಯ ಎಚ್.ಎಸ್. ಸಿದ್ದರಾಜು ಅಭಿಪ್ರಾಯಪಟ್ಟರು.

ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಾವೆಲ್ಲರೂ ಅಗತ್ಯ ಸಹಕಾರ ನೀಡುತ್ತೇವೆ. ಹಾಗಾಗಿ, ಭೂ ಸ್ವಾಧೀನ ಪ್ರಕ್ರಿಯೆ ಮುಗಿಸಬೇಕು. ಪರಿಹಾರ ಪಾವತಿ ಅಥವಾ ನಿವೇಶನ ಹಂಚಿಕೆಯಲ್ಲಿ ಮಧ್ಯವರ್ತಿಗಳಿಗೆ ಅವಕಾಶವಿಲ್ಲದೆ, ಎಲ್ಲವೂ ಪಾರದರ್ಶಕವಾಗಿ ನಡೆಯಬೇಕು. ಪ್ರತಿ ಹಂತದಲ್ಲಿ ಭೂ ಮಾಲೀಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ರೈತರಾದ ಶಿವಕುಮಾರ್, ನಾಗೇಶ್, ನರಸಿಂಹಮೂರ್ತಿ, ಎಂ.ವಿ. ಮಂಜುನಾಥ್, ನಂದೀಶ್, ಶಿವರಾಮು, ಲಕ್ಷ್ಮಿ ನಾರಾಯಣರೆಡ್ಡಿ, ಗುರುಸ್ವಾಮಿ, ಪ್ರಕಾಶ್, ರವೀಶ್, ಮಂಜುನಾಥ್, ನಾಗರಾಜ್, ಭರತ್, ಶೇಖರ್, ಮುನಿರಾಜು, ಜಯರಾಮ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-14-331928289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.