ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಗೆ ಫಲವತ್ತಾದ ಭೂಮಿಯ ಸ್ವಾಧೀನ ಕೈ ಬಿಡಬೇಕು ಎಂದು ಒತ್ತಾಯಿಸಿ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತರ ಭೂ ಹಿತರಕ್ಷಣಾ ಸಮಿತಿ ಪ್ರತಿನಿಧಿಗಳು ಹಾಗೂ ರೈತರ ನಿಯೋಗವು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಭಾನುವಾರ ಉಪ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನಿಯೋಗವು, ಯೋಜನೆಗಾಗಿ ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆ ರದ್ದುಪಡಿಸಬೇಕು. ಆ ಮೂಲಕ, ಈ ಭಾಗದ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಮನವಿ ಮಾಡಿದರು.

ಮನವಿಯಲ್ಲಿ ಏನಿದೆ?: ಯೋಜನೆಗಾಗಿ 2025ರ ಮಾರ್ಚ್ 13ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಇದೀಗ ಅಂತಿಮ ಅಧಿಸೂಚನೆ ಹೊರಡಿಸುವುದಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಯೋಜನೆ ವಿರೋಧಿಸಿ ಆರಂಭದಿಂದಲೇ ರೈತರ ಭೂ ಹಿತರಕ್ಷಣಾ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದ್ದು, ಭಾನುವಾರಕ್ಕೆ 428ನೇ ದಿನಕ್ಕೆ ಕಾಲಿಟ್ಟಿದೆ.

ಉಪನಗರಕ್ಕೆ ಗುರುತಿಸಿರುವ ಭೈರಮಂಗಲ ಗ್ರಾ.ಪಂ. ವ್ಯಾಪ್ತಿಯ 10 ಗ್ರಾಮಗಳು ಹಾಗೂ ಕಂಚುಗಾರನಹಳ್ಳಿ ಗ್ರಾ.ಪಂ.ನ 16 ಗ್ರಾಮಗಳು ಕೃಷಿ ಮತ್ತು ತೋಟಗಾರಿಕೆಯ ಫಲವತ್ತಾದ ಭೂಮಿ ಹೊಂದಿವೆ. ಬಹು ವಾರ್ಷಿಕ ಬೆಳೆಗಳು ಸೇರಿದಂತೆ ವಿವಿಧ ರೀತಿಯ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಜೊತೆಗೆ ಈ ಪ್ರದೇಶದ ರೈತರು ತಮ್ಮ ಬದುಕಿಗಾಗಿ ಹೈನುಗಾರಿಕೆ ನೆಚ್ಚಿಕೊಂಡಿದ್ದಾರೆ.

ವಿರೋಧ: ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗಲೇ ಯೋಜನಾ ವ್ಯಾಪ್ತಿಯ 3,500 ರೈತರು ಯೋಜನೆಗೆ ವಿರೋಧ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ತಹಶೀಲ್ದಾರ್ ಕಚೇರಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿದ್ದೇವೆ. ಹಲವರಿಗೆ ಮನವಿ ಸಲ್ಲಿಸಿದ್ದೇವೆ. ರೈತರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ತಾವು ಭೂ ಸ್ವಾಧೀನ ಕೈ ಬಿಡಬೇಕು ಎಂದು ರೈತರ ನಿಯೋಗವು ಡಿಸಿಎಂ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-14-1330876183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.