ಬಿಡದಿ: ‘ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡಿರುವ ಸಮೃದ್ಧ ಭೂಮಿಯನ್ನು ಬಂಜರು ಭೂಮಿ ಎಂದು ಸುಳ್ಳು ಹೇಳಿ ರೈತರಿಗೆ ದ್ರೋಹ ಮಾಡಲು ಸರ್ಕಾರ ಮುಂದಾಗಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಬಿಡದಿ ಹೋಬಳಿಯ ಬೈರಮಂಗಳದಲ್ಲಿ ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದರು.

‘ಫಲವತ್ತಾದ ಭೂಮಿ ಬೆಂಗಳೂರು ಪಕ್ಕದಲ್ಲೇ ಬೆಟ್ಟಗುಡ್ಡಗಳಿಂದ ಕೂಡಿದ ಫಲವತ್ತಾದ ಜಮೀನು ಇರುವುದು ಅಚ್ಚರಿಯ ಸಂಗತಿ. ಇದಕ್ಕೂ ಮೊದಲು ಈ ಭಾಗದ ವಿವಿಧ ಗ್ರಾಮದ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಕಲೆಹಾಕಿ ಹಾಗೂ ವಿವಿಧ ಬೆಳೆಗಳನ್ನು ವೀಕ್ಷಣೆ ಮಾಡಿ ವರ್ಷಪೂರ್ತಿ ಬೆಳೆ ಬೆಳೆಯಲು ಪೂರಕವಾದ ವಾತಾವರಣ ಇಲ್ಲಿದೆ’ ಎಂದರು.

‘ಕಣ್ಣು, ಕಿವಿ, ಮೂಗು ಇಲ್ಲದ ನೀಚರು ಮಾತ್ರ ಈ ಪ್ರದೇಶವನ್ನು ಬಂಜರು ಭೂಮಿ ಎಂದು ಕರೆಯಲು ಸಾಧ್ಯ. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಲಾಗುತ್ತಿದೆ’ ಎಂದು ಅವರು ಕಿಡಿಕಾರಿದರು.

ಬೈರಮಂಗಲ ಮತ್ತು ಕಂಚುಗಾರನಹಳ್ಳಿ ರೈತರ ಭೂ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಕೆಆರ್ಎಸ್ ಪಕ್ಷ ಸಂಪೂರ್ಣ ಬೆಂಬಲ ಎಂದು ಘೋಷಿಸಿತು. ರೈತರ ಸಮ್ಮತಿಯಿಲ್ಲದೆ ಭೂಸ್ವಾಧೀನ ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಲಾಯಿತು.

ಜೀವನ್, ರಾಮಕೃಷ್ಣಯ್ಯ, ರೈತ ಸಂಘದ ಅಧ್ಯಕ್ಷ ರಾಮಣ್ಣ, ನಾಗರಾಜು, ಮುಖಂಡ ಹೊಸೂರು ಪ್ರಕಾಶ್, ರಾಧಾಕೃಷ್ಣ, ಅರಳಾಳುಸಂದ್ರ ಅಶ್ವಥ್ ಹಾಗೂ ಹೇಮಂತ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-14-1181672547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.