ಶ್ರೀನಿವಾಸಪುರ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರನ್ನು ಬೆಂಬಲಿಸಿ, ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಮೇ 29ರಂದು ಬೈರಮಂಗಲ ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ತಿಳಿಸಿದರು.

ಶ್ರೀನಿವಾಸಪುರದ ರೈತ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫಲವತ್ತಾದ 9,640 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಗೆ ಒಳಪಡಿಸಿ ಕಾರ್ಪೋರೇಟ್ ಕಂಪನಿಗಳಿಗೆ ನೀಡಲು ರೈತರಿಗೆ ಕಿರುಕುಳ ನೀಡುತ್ತಿದೆ. ಇದನ್ನು ವಿರೋಧಿಸಿ ರೈತರನ್ನು ಬೆಂಬಲಿಸಿ ಬೈರಮಂಗಲ ಚಲೊ ಹಮ್ಮಿಕೊಳ್ಳಲಾಗಿದೆ ಎಂದರು.

ಮೇ 29 ರಂದು ಅಬ್ಬನಕುಪ್ಪೆಯಿಂದ ಬೈರಮಂಗಲವರೆಗೆ ಬೃಹತ್ ಮೆರವಣಿಗೆ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೂರಾರು ರೈತ ಸಂಘದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಅಧ್ಯಕ್ಷ ಎನ್.ಎನ್.ಶ್ರೀರಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತ್ಕೋಟೆ ನವೀನ್ ಕುಮಾರ್, ಜಿಲ್ಲಾ ಜಂಟಿ ಕಾರ್ಯದರ್ಶಿ ಜಿ.ಮಂಜು, ತಾಲ್ಲೂಕು ಅಧ್ಯಕ್ಷ ಸೋಮಶೇಖರ್ ಗೌಡ, ಶಿವರಾಜ್ ಕುಮಾರ್ ಅವಳಕುಪ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-18-170327659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.