ರಾಮನಗರ: ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನಡೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರು ಶನಿವಾರ ನಗರದ ಐಜೂರು ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು.

ಮಹಿಳಾ ಮೀಸಲಾತಿ ಕಲ್ಪಿಸುವ ಕೇಂದ್ರ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ಕಾಯ್ದೆಗೆ ಲೋಕಸಭೆ ಅಧಿವೇಶನದಲ್ಲಿ ಸೋಲಾಗಿದೆ. ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿಯಾಗಿದೆ. ಕಾಂಗ್ರೆಸ್ ಪಕ್ಷದ ಈ ನಿಲುವನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಸಿ. ಪವಿತ್ರ

ಮಹಿಳೆಯರ ಅಭಿವೃದ್ಧಿ ಮಾಡುತ್ತೇವೆ ಅವರಿಗೆ ಉನ್ನತ ಸ್ಥಾನ ನೀಡುತ್ತೇವೆ ಎನ್ನುವ ಕಾಂಗ್ರೆಸ್ ಪಕ್ಷದ ಮಾತು ಬರೀ ಬಾಯಿ ಮಾತಾಗಿದೆ. ಕೆಳವರ್ಗದ ಮಹಿಳೆಯರು ಅಭಿವೃದ್ಧಿಯತ್ತ ಬರಬಾರದು ಎಂಬುದೇ ಇವರ ಪ್ರಮುಖ ಉದ್ದೇಶವಾಗಿದೆ. ಈ ಕಾರಣದಿಂದ ಮಹಿಳಾ ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಪಕ್ಷದವರು ಯಾವುದೇ ಆಸಕ್ತಿ ತೋರದೆ ಮಹಿಳಾ ವಿರೋಧಿ ನಡೆ ಅನುಸರಿಸಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷ ಮಹಿಳೆಯರಿಂದ ವಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಹಿಳಾ ಮೀಸಲಾತಿ ಜಾರಿ ಮಾಡಬೇಕು ಎಂಬ ಉದ್ದೇಶವನ್ನು ಬಿಜೆಪಿ ಹೊಂದಿತ್ತು. ಆದರೆ ಕಾಂಗ್ರೆಸ್ ಹಾಗೂ ಮಿತ್ರಪಕ್ಷದ ಸದಸ್ಯರ ಮುಖವಾಡ ಕಳಚಿದೆ. ಕಾಂಗ್ರೆಸ್ ಪಕ್ಷ ಮಹಿಳೆಯರ ವಿರೋಧಿ ಎಂದು ಸಾಬೀತಾಯಿತು. ಕಾಂಗ್ರೆಸ್ ಮಹಿಳೆಯರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ. ಮುಂಬರುವ ಚುನಾವಣೆಯಲ್ಲಿ ಮಹಿಳಾ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ರುದ್ರದೇವರು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ, ಚಂದ್ರಪ್ರಭ, ಎಸ್.ಆರ್. ನಾಗರಾಜು, ಪ್ರಕಾಶ್, ಕಾಳಯ್ಯ, ದೇವಿಕಾ, ಬಿ. ನಾಗೇಶ್, ವಿ. ರಾಜು, ಚೇತನ್ ಕುಮಾರ್, ಚಂದ್ರಶೇಖರ್, ರಂಗಸ್ವಾಮಿ, ಸಿದ್ದು, ಜಯರಾಮ್, ಶಿವಮುತ್ತು, ಗೀತಾಂಜಲಿ, ಮಮತ, ಪೂರ್ಣಿಮಾ, ಫಾತೀಮಾ, ಹೇಮಾವತಿ, ಬೊಮ್ಮೇಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-14-350346089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.