ಕನಕಪುರ: ಊರ ಹಬ್ಬದ ಊಟ ಮುಗಿಸಿ ಬೈಕ್ನಲ್ಲಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ಬಿಎಂಟಿಸಿ ಮೆಕ್ಯಾನಿಕ್ ಕೋಡಿಹಳ್ಳಿ ರಸ್ತೆಯ ಪ್ಲಾಂಟೇಶನ್ ಬಳಿ ಬುಧವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಚುಂಚಿ ಕಾಲೋನಿಯ ನಿವಾಸಿ ಮಹೇಶ್ (42) ಮೃತ ವ್ಯಕ್ತಿ. ಅವರು ಬೆಂಗಳೂರಿನಲ್ಲಿ ಬಿಎಂಟಿಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಬುಧವಾರ ತಮ್ಮ ಗ್ರಾಮದಿಂದ ಬೈಕಿನಲ್ಲಿ ಸ್ವಾಮಿರಾಜ್ ಜೊತೆ ಬೆಟ್ಟಳ್ಳಿ ಪಕ್ಕದ ಅರಗಾಡು ಗ್ರಾಮದಲ್ಲಿ ನಡೆದ ಊರ ಹಬ್ಬಕ್ಕೆ ಹೋಗಿ ಊಟ ಮುಗಿಸಿ ವಾಪಸ್ ಗ್ರಾಮಕ್ಕೆ ಹೋಗುತ್ತಿದ್ದಾಗ ಕೋಡಿಹಳ್ಳಿ ಪ್ಲಾಂಟೇಶನ್ ಬಳಿ ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಮಹೇಶ್ ತಲೆಗೆ ತೀವ್ರ ಪೆಟ್ಟಾಗಿ ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲಿ ಸಾವನಪ್ಪಿದರು. ಹಿಂಬದಿಯ ಸವಾರ ಸ್ವಾಮೀರಾಜ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಡಿಹಳ್ಳಿ ಪೊಲೀಸರು ಶವವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದರು. ಎರಡೂ ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-2094915953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.