ರಾಮನಗರ: ಇಲ್ಲಿನ ‘ನಮ್ಮವರು’ ಬಳಗವು ಪತ್ರಕರ್ತ ನವೀನ್ ಸೂರಿಂಜೆ ಬರೆದಿರುವ ನವಕರ್ನಾಟಕ ಪ್ರಕಾಶನ ಪ್ರಕಟಿತ ‘ಕರಾವಳಿಯ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವನ್ನು ಭಾನುವಾರ ಸಂಜೆ 4.30ಕ್ಕೆ ನಗರದಲ್ಲಿ ಹಮ್ಮಿಕೊಂಡಿದೆ. ನಗರದ ಜೂನಿಯರ್ ಕಾಲೇಜು ಮೈದಾನದ ಎದುರಿಗೆ ಇರುವ ಗಾಂಧಿನಗರದ ರಾಮ್ ಕಮಲ್ ಪಾರ್ಟಿ ಹಾಲ್ನಲ್ಲಿ ಕಾರ್ಯಕ್ರಮ ಜರುಗಲಿದೆ. ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಕೃತಿ ಕುರಿತು ಮಾತನಾಡಲಿದ್ದಾರೆ. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅನ್ಸರ್ ಉಲ್ ಹಕ್ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.

ಹೋರಾಟಗಾರ ಮುನೀರ್ ಕಾಟಿಪಳ್ಳ, ಜಿಲ್ಲಾಧ್ಯಕ್ಷರು, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರ ಸ್ವಾಮಿ, ಎಂಜಿಎಫ್ ಕಾರ್ಯದರ್ಶಿ ಡಾ. ನಯಾಜ್ ಅಹಮದ್, ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಹಾಗೂ ಕೃತಿ ಲೇಖಕ ನವೀನ್ ಸೂರಿಂಜೆ ಉಪಸ್ಥಿತಿ ವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-14-1665366093

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.