ಮಾಗಡಿ: ಮಾಗಡಿ-ಹುಲಿಯೂರು ಮುಖ್ಯರಸ್ತೆಯ ಹನುಮಂತಪುರ ಗೇಟ್ ಬಳಿ ಬುಧವಾರ ಖಾಸಗಿ ಬಸ್ ಟೈರ್ ಸ್ಫೋಟಗೊಂಡು ಬಸ್ನಿಂದ ಬೇರ್ಪಟ್ಟು ಎದುರಿಗೆ ಬರುತ್ತಿದ್ದ ಬೈಕ್ಗೆ ಅಪ್ಪಳಿಸಿದೆ. ಟೈರ್ ಅಪ್ಪಳಿಸಿದ ರಭಸಕ್ಕೆ ಬೈಕ್ನಲ್ಲಿ ಹೊರಟಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟೈರ್ ಬೈಕ್ನಲ್ಲಿದ್ದ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಶಿವಣ್ಣ (45) ಹಾಗೂ ಹಿಂಬದಿ ಕುಳಿತಿದ್ದ ಗಂಗಮ್ಮ(58) ಮೃತಪಟ್ಟಿದ್ದಾರೆ. ಗಣೇಶ ಹಬ್ಬಕ್ಕೆ ಅತ್ತೆ ಗಂಗಮ್ಮ ಅವರನ್ನು ಅಳಿಯ ಶಿವಣ್ಣ ಬೈಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೊರಟಿದ್ದರು.

ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಟೈರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬಸ್ನಿಂದ ಚಿಮ್ಮಿ ವೇಗವಾಗಿ ಹೋಗಿ ಎದುರಿನಿಂದ ಬರುತ್ತಿದ್ದ ಬೈಕ್ಗೆ ಅಪ್ಪಳಿಸಿದೆ. ಟೈರ್ ಅಪ್ಪಳಿಸಿದ ರಭಸಕ್ಕೆ ಬೈಕ್ನಲ್ಲಿ ಹೊರಟಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯ ಡಿವೈಡರ್ಗೆ ಗುದ್ದಿದ್ದು ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಮಾಗಡಿ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಶವಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.