ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ | ಗಾಂಜಾ ಗಿಡ ಪತ್ತೆ

ಗಾಂಜಾ ಗಿಡ ಪತ್ತೆ
Published 24 ಜನವರಿ 2024, 7:26 IST
Last Updated 24 ಜನವರಿ 2024, 7:26 IST
ಅಕ್ಷರ ಗಾತ್ರ

ಕನಕಪುರ: ಮನೆ ಹಿಂಭಾಗದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ರಾಂಪುರ ಗ್ರಾಮದಲ್ಲಿ ರಾಜೀವ್ ಕನಿಯಾ ಲಾಲ್ ಬಪ್ನ ಎಂಬುವರಿಗೆ ಸೇರಿದ ಎಸ್ಟೇಟ್‌ನ ಮನೆ ಹಿಂಭಾಗದಲ್ಲಿ ಗಾಂಜಾ ಗಿಡ ಬೆಳೆಯಲಾಗಿತ್ತು.

ಎಸ್ಟೇಟ್‌ನಲ್ಲಿ ಜಮೀನು ನೋಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಈ ಗಾಂಜಾ ಗಿಡ ಬೆಳೆದಿದ್ದ ಎನ್ನಲಾಗಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಪರಾರಿಯಾಗಿದ್ದಾನೆ. ಸುಮಾರು 12 ಎತ್ತರದ, 7 ಕೆ.ಜಿಯಷ್ಟು ತೂಕದ ಗಿಡವಾಗಿದೆ. 

ಕೋಡಿಹಳ್ಳಿ ಪೊಲೀಸ್‌ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ರವಿಕುಮಾರ್‌ ನೇತೃತ್ವದಲ್ಲಿ ದಾಳಿ ನಡೆಯಿತು. ಅರಣ್ಯ ಇಲಾಖೆ ಮತ್ತು ಪಂಚಾಯಿತಿ ಪಿಡಿಒ ಸಮಕ್ಷಮದಲ್ಲಿ ಪಂಚನಾಮೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT