ರಾಮನಗರ: ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ, ಹತ್ಯೆ ಹಾಗೂ ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಈ ಕುರಿತು ಪೊಲೀಸರು ನಿಗಾ ವಹಿಸಬೇಕು ಎಂದು ಶ್ರೀರಾಮ ಸೇನಾ ಆಗ್ರಹಿಸಿದೆ. ಈ ಕುರಿತು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ನಾಗಾರ್ಜುನ ಗೌಡ, ‘ಬಕ್ರೀದ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಗೋವುಗಳ ಸಾಗಾಟ ಮತ್ತು ಹತ್ಯೆ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಎಲ್ಲಾ ಚೆಕ್ಪೋಸ್ಟ್ ಗಡಿಭಾಗಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ 24x7 ವಿಶೇಷ ತಪಾಸಣೆ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಗೋವು ಸಾಗಿಸುವ ವಾಹನಗಳ ದಾಖಲೆಗಳು, ಪರವಾನಗಿ ಹಾಗೂ ಪಶು ವೈದ್ಯಕೀಯ ಪ್ರಮಾಣಪತ್ರಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಗೋದಾಮುಗಳು ಹಾಗೂ ಖಾಸಗಿ ಸ್ಥಳಗಳ ಮೇಲೆ ವಿಶೇಷ ದಾಳಿ ನಡೆಸಬೇಕು’ ಎಂದು ಆಗ್ರಹಿಸಿದರು.

‘ಪೊಲೀಸ್ ಇಲಾಖೆ, ಪಶುಪಾಲನಾ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಜಂಟಿ ಕಾರ್ಯಪಡೆ ರಚಿಸಿ ನಿರಂತರ ನಿಗಾ ವಹಿಸಬೇಕು. ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಬೇಕು. ಜಿಲ್ಲೆಯಾದ್ಯಂತ ರಾತ್ರಿ ವಿಶೇಷ ಪೊಲೀಸ್ ಗಸ್ತು ವ್ಯವಸ್ಥೆ ಜಾರಿಗೆ ತರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ಕಾನೂನುಬಾಹಿರ ಪೋಸ್ಟ್ಗಳ ಮೇಲೆ ವಿಶೇಷ ನಿಗಾ ವಹಿಸಬೇಕು’ ಎಂದರು.

ಶ್ರೀರಾಮ ಸೇನಾ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಪರಮೇಶಗೌಡ, ವಿಭಾಗೀಯ ಅಧ್ಯಕ್ಷ ನವೀನ್, ರಾಮನಗರ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ, ಹಾರೋಹಳ್ಳಿ ತಾಲ್ಲೂಕು ಅಧ್ಯಕ್ಷ ಕುಮಾರ್, ಸಾಗರ್, ರಾಜಗೋಪಾಲ್, ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-14-1978266260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.