ರಾಮನಗರ: ನಗರಸಭೆ ಮತ್ತು ಅಕ್ಕ ಐಎಎಸ್ ಅಕಾಡೆಮಿಯ ಕೆ-ಸಿಇಟಿ, ನೀಟ್ ಹಾಗೂ ಜೆಇಇ ಕೋರ್ಸ್ಗಳ ಉಚಿತ ತರಬೇತಿಯ ಸಮಾರೋಪ ಸಮಾರಂಭ ಮಂಗಳವಾರ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಅಣಕು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಿಂಚನ ಮತ್ತು ನೂರ್ ಸಿಮ್ರಾನ್ಗೆ ಬಹುಮಾನ ವಿತರಿಸಲಾಯಿತು. ತರಬೇತಿ ಕುರಿತು ವಿದ್ಯಾರ್ಥಿಗಳು ಅಭಿಪ್ರಾಯ ಹಂಚಿಕೊಂಡರು.

ಬಡ ವಿದ್ಯಾರ್ಥಿಗಳು ಸಹ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸೇರುವ ಕನಸಿಗೆ ನೀರೆರೆಯುವ ಕೆಲಸವನ್ನು ನಗರಸಭೆ ಮಾಡಿದೆ. ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ನಗರಸಭೆಯೊಂದು ತರಬೇತಿ ನೀಡುತ್ತಿರುವುದು ರಾಜ್ಯದಲ್ಲೇ ಇದೇ ಮೊದಲು. ಅಕ್ಕ ಐಎಎಸ್ ಅಕಾಡೆಮಿಗೆ ತರಬೇತಿಯ ಹೊಣೆ ವಹಿಸಿದೆವು. ನಿರೀಕ್ಷೆಯಂತೆ ಅವರು ವಿದ್ಯಾರ್ಥಿಗಳನ್ನು ಅಣಿಗೊಳಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹೇಳಿದರು.

ಖಾಸಗಿ ಸಂಸ್ಥೆಗಳ ತರಬೇತಿಗೆ ಸಾವಿರಾರು ರೂಪಾಯಿ ಶುಲ್ಕ ನೀಡಬೇಕಿತ್ತು. ನಗರಸಭೆ ಉಚಿತವಾಗಿ ತರಬೇತಿ ನೀಡುವ ಮೂಲಕ ಬಡವರಿಗೆ ನೆರವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಡಿ. ಶೇಖರ್ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರು ಸಹ ಮುಕ್ತ ಮನಸ್ಸಿನಿಂದ ಬೆಂಬಲಿಸಿದ್ದಾರೆ. ಮುಂದಿನ ವರ್ಷವೂ ತರಬೇತಿ ಮುಂದುವರಿಸಲು ನಗರಸಭೆ ನಿರ್ಣಯಿಸಿದೆ ಎಂದು ನಗರಸಭೆ ಪೌರಾಯುಕ್ತ ಡಾ. ಜಯಣ್ಣ ಹೇಳಿದರು.

ನಗರಸಭೆ ಸದಸ್ಯ ಹಾಗೂ ಕಾಲೇಜು ಅಭಿವೃದ್ಧಿ ಉಪಾಧ್ಯಕ್ಷ ಬೈರೇಗೌಡ, ಅಕ್ಕ ಐಎಎಸ್ ಅಕಾಡೆಮಿ ಸಂಯೋಜಕ ಡಾ. ಲಕ್ಷ್ಮಣ್ ಬಿ. ಅತಿಥಿಗಳನ್ನು ಸ್ವಾಗತಿಸಿದರು. ತರಬೇತುದಾರ ಡಾ. ಸಂದೀಪ್ ಆರ್.ಎಸ್ ವಂದನಾರ್ಪಣೆ ಮಾಡಿದರು. ಉಪನ್ಯಾಸಕರಾದ ಮಹೇಶ್, ಮುತ್ತುರಾಜ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-14-1749840689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.