ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ಮೇ 11ರಿಂದ ಹತ್ತು ದಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ನಿತ್ಯ ಬೆಳಗ್ಗೆ 8ರಿಂದ ರಾತ್ರಿ 9ರವರೆಗೆ 8 ಮಾರ್ಗಗಳಲ್ಲಿ ಸ್ವಾಮೀಜಿ ಪ್ರವಾಸ ಮಾಡಲಿದ್ದಾರೆ ಎಂದು ಆದಿಚಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಾನಪದ ಲೋಕದ ಬಳಿ ಇರುವ ಬಾಲಗಂಗಾಧರನಾಥ ಅಂಧರ ಶಾಲಾ ಸಭಾಂಗಣದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಜಾಗೃತಿ ಅಭಿಯಾನ ಕೈಗೊಂಡಿದ್ದಾರೆ ಎಂದರು.

ಶ್ರೀಗಳು ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಆಧ್ಯಾತ್ಮಿಕ ಮಾರ್ಗದಲ್ಲಿ ಸಮಾಜ ಮುನ್ನಡೆಸುವ ದೂರದೃಷ್ಟಿ ಹೊಂದಿದ್ದಾರೆ. ಮಠ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅರಣ್ಯ, ಆಕಳು, ಅನುಕಂಪ, ಅನುಬಂಧ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ನೀಡುತ್ತಾ ಬಂದಿದೆ ಎಂದರು.

ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಅಭಿಯಾನ ಸಮಾಜವನ್ನು ಜಾಗೃತಿಗೊಳಿಸುವ ಮೂಲಕ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಲಿದೆ ಎಂದು ಅಭಿಯಾನದ ಉಸ್ತುವಾರಿ ಸಮಿತಿಯ ರಮೇಶ್ ಗೌಡ ತಿಳಿಸಿದರು.

ನಿಂಗೇಗೌಡ, ತಿಟ್ಟಮಾರನಹಳ್ಳಿ ಅಭಿಲಾಷ್, ಎಚ್.ಸಿ. ಜಯಮುತ್ತು, ಶಿವಮಾದು, ಎಲೇಕೇರಿ ರವೀಶ್, ರಮೇಶ್ ಗೌಡ, ಧರಣೇಶ್ ರಾಂಪುರ, ರಮ್ಯಾ ಸ್ವಾಮಿ ಗೌಡ, ಪಿ. ರವಿಕುಮಾರ್, ಶ್ಯಾನುಭೋಗನಹಳ್ಳಿ ರವಿ, ಮಠದ ಶಿವರಾಮು ಹಾಗೂ ಚನ್ನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-14-896489340

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.