ಚನ್ನಪಟ್ಟಣ: ಸಭೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಬಾರದಿದ್ದರೆ ಅಂತಹ ಸಭೆಗಳನ್ನು ನಡೆಸಿ ಪ್ರಯೋಜನವೇನು? ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಅಧಿಕಾರಿಗಳೆ ಇಲ್ಲ ಎಂದ ಮೇಲೆ ಸಭೆಯನ್ನು ಮುಂದೂಡಿ, ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ಮಾಡಿ ಎಂದು ನಗರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಬಿ.ಎಂ.ನಾಗೇಶ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಬೀದಿದೀಪಗಳ ನಿರ್ವಹಣೆ ಹಾಗೂ ವಿದ್ಯುತ್ ಕಂಬಗಳ ಬದಲಾವಣೆ, ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಬೆಸ್ಕಾಂ ಅಧಿಕಾರಿಗಳು ಸಭೆಯಲ್ಲಿ ಹಾಜರು ಇಲ್ಲದ್ದರಿಂದ ಕೆಲವು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳನ್ನು ಈಗಲೇ ಕರೆಸಿ, ಇಲ್ಲವೆ ಸಭೆಯನ್ನು ಮುಂದೂಡಿ ಎಂದು ಆಗ್ರಹಿಸಿದರು. ನಂತರ ಸಭೆಗೆ ಬೆಸ್ಕಾಂ ಅಧಿಕಾರಿಯನ್ನು ಕರೆಸಲಾಯಿತು.

ಬೀದಿದೀಪಗಳ ನಿರ್ವಹಣೆಯನ್ನು ಸೂಕ್ತವಾಗಿ ಮಾಡಲಾಗುತ್ತಿದೆ. ಕೆಲವೆಡೆ ವಿದ್ಯುತ್ ಕಂಬಗಳ ಬದಲಾವಣೆ ಮಾಡಲಾಗಿದೆ. ಕೆಲವೆಡೆ ಸ್ಥಳಾಂತರ ಮಾಡಲಾಗಿದೆ ಎಂದು ಉತ್ತರ ನೀಡಿದರು. ಇದಕ್ಕೆ ಕೆಲವು ಸದಸ್ಯರು ವಿರೋಧ ವ್ಯಕ್ತಪಡಿಸಿ ನಮ್ಮ ವಾರ್ಡ್ಗಳಲ್ಲಿ ವಿದ್ಯುತ್ ಕಂಬಗಳ ದುಸ್ಥಿತಿ ಬಗ್ಗೆ ಫೋಟೋ ಸಮೇತ ನಿಮ್ಮ ಇಲಾಖೆಗೆ ತಿಳಿಸಿದ್ದರೂ ಅವುಗಳನ್ನು ಸರಿಪಡಿಸಿಲ್ಲ ಎಂದು ಆರೋಪಿಸಿದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗೆ ಸೂಚಿಸಲಾಯಿತು.

ಪಾರ್ಕಿಂಗ್ ಸಮಸ್ಯೆ ಪರಿಹರಿಸಿ: ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಅಂತಹ ರಸ್ತೆಗಳ ಇಕ್ಕೆಲಗಳಲ್ಲಿ ಕೆಲವರು ವಾಹನಗಳನ್ನು ನಿಲುಗಡೆ ಮಾಡುತ್ತಿರುವ ಕಾರಣ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಅಂತಹ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ಪೊಲೀಸ್ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.

ಇದಕ್ಕೆ ದನಿಗೂಡಿಸಿದ ಅಧ್ಯಕ್ಷರು, ನಗರದ ಎಂ.ಜಿ. ರಸ್ತೆ, ಅಂಚೆ ಕಚೇರಿ ರಸ್ತೆ, ಜೆಸಿ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ಜನರ ಓಡಾಟಕ್ಕೆ ಬಹಳ ತೊಂದರೆಯಾಗುತ್ತಿದೆ. ಈ ರಸ್ತೆಗಳಲ್ಲಿ ವಾಹನಗಳನ್ನು ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಾರೆ. ಇಂತಹ ರಸ್ತೆಗಳಲ್ಲಿ ವಾರದಲ್ಲಿ ಒಂದು ದಿನ ರಸ್ತೆಯ ಒಂದು ಬದಿಯಲ್ಲಿ, ಮತ್ತೊಂದು ದಿನ ಮತ್ತೊಂದು ಬದಿಯಲ್ಲಿ ನಿಲ್ಲಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.

ಯುಜಿಡಿ ಹಣಕ್ಕಾಗಿ ಹರಾಜು: ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕಾಮಗಾರಿಯ ವೆಟ್ ವೆಲ್ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆಗಾಗಿ ಜಮೀನಿನ ಫಲಾನುಭವಿಗಳಿಗೆ ತುರ್ತಾಗಿ ಹಣ ಪಾವತಿಸಿಬೇಕಿರುವ ಕಾರಣ ನಗರಸಭೆ ವತಿಯಿಂದ ಖರೀಸಿದ್ದ ಜಮೀನಿನ ಹರಾಜು ಮಾಡಲಾಗುವುದು ಎಂದು ಆಯುಕ್ತ ಮಹೇಂದ್ರ ಸಭೆಗೆ ತಿಳಿಸಿದರು.

ತಾಲ್ಲೂಕಿನ ಮೈಲನಾಥಪುರ ಸರ್ವೆ ನಂಬರ್ 7 ಹಾಗೂ 8 ರಲ್ಲಿ ವೆಟ್ವೆಲ್ ನಿರ್ಮಾಣಕ್ಕಾಗಿ 3.36 ಎಕರೆ ಜಮೀನು ಖರೀದಿಸಲಾಗಿತ್ತು. ಆದರೆ ಆ ಯೋಜನೆಯನ್ನು ಕೈಬಿಟ್ಟು ಹೊಸ ನೀಲನಕ್ಷೆಯಂತೆ ವಂದಾರಗುಪ್ಪೆ ಬಳಿ ವೆಟೆ ವೆಲ್ ನಿರ್ಮಾಣ ಮಾಡಲಾಗುತ್ತಿದೆ. ಹಾಗಾಗಿ ಆ ಜಮೀನನ್ನು ನಿಯಮದಂತೆ ಹರಾಜು ಮಾಡಲಾಗುವುದು. ಆ ಹಣದಲ್ಲಿ ನೂತನ ವೆಟ್ವೆಲ್ ಜಮೀನು ಫಲಾನುಭವಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು. ಇದಕ್ಕೆ ಸಭೆ ಒಪ್ಪಿಗೆ ಸೂಚಿಸಿತು.

ನಂತರ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸಯರ ನೇಮಕ ಮಾಡಿ ಅನುಮೋದನೆ ಪಡೆಯಲಾಯಿತು. ನಗರದ ಅಭಿವೃದ್ಧಿ ಹಾಗೂ ಸಮಸ್ಯೆ ಕುರಿತು ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-1223250894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.