ಚನ್ನಪಟ್ಟಣ: ಪೌರ ಕಾರ್ಮಿಕರಿಗೆ ನಗರಸಭೆ ವತಿಯಿಂದ ನಿವೇಶನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾರ್ಮಿಕರಿಗೆ ನಿವೇಶನ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಅವರ ಬೇಡಿಕೆಯನ್ನು ಈ ಅವಧಿಯಲ್ಲಿಯೆ ಈಡೇರಿಸಲಾಗುವುದು ಎಂದು ನಗರಸಭೆ ಅಧ್ಯಕ್ಷ ಬಿ.ಎಂ. ನಾಗೇಶ್ ಭರವಸೆ ನೀಡಿದರು.

ನಗರಸಭೆ ವತಿಯಿಂದ ಖಾಸಗಿ ರೆಸಾರ್ಟ್ನಲ್ಲಿ ಮಂಗಳವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರು ಚಳಿ, ಮಳೆ, ಬಿಸಿಲೆನ್ನದೆ ಮುಂಜಾನೆಯಿಂದಲೇ ನಗರವನ್ನು ಸ್ವಚ್ಛವಾಗಿಟ್ಟು ಜನರ ಆರೋಗ್ಯವನ್ನು ಕಾಪಾಡುತ್ತಾರೆ. ಅಂತಹವರ ಯೋಗಕ್ಷೇಮ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದರು.

ಪೌರ ಕಾರ್ಮಿಕರು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸರ್ಕಾರವು ಹಲವಾರು ಸವಲತ್ತುಗಳನ್ನು ನೀಡಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪೌರಾಯುಕ್ತ ಬಿ. ಮಹೇಂದ್ರ ಮಾತನಾಡಿ, ನಗರದ ಸ್ವಚ್ಚತೆಗೆ ಹೆಚ್ಚು ಶ್ರಮಪಡುವವರು ಪೌರ ಕಾರ್ಮಿಕರು. ನಗರದ ಅಂದ ಕಾಪಾಡಲು ಅವರ ಕೊಡುಗೆ ಅಪಾರ. ಸಾರ್ವಜನಿಕರು ಕಾರ್ಮಿಕರಿಗೆ ಸಹಕಾರ ನೀಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕ್ರೀಡಾ ಚಟುವಟಿಕೆಗಳಲ್ಲಿ ಗೆಲುವು ಸಾಧಿಸಿದ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಉಪಾಧ್ಯಕ್ಷ ಲೋಕೇಶ್, ಸದಸ್ಯರಾದ ವಾಸಿಲ್ ಆಲಿಖಾನ್, ಸತೀಶ್ ಬಾಬು, ಸಾಭೀರ್, ಮತೀನ್ ಖಾನ್, ಸುಮಾ ರವೀಶ್, ಸರ್ವಮಂಗಳ ಲೋಕೇಶ್, ನಿಗರ್ ಬೇಗಂ, ಸಾಹಿದಾ ಬಾನು, ಅಬಿದಾಬಾನು, ಶಿವಮಾಲಿನಿ, ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು, ಜಿಲ್ಲಾಧ್ಯಕ್ಷ ವೆಂಕಟೇಶ್, ರಾಮನಗರ ಶಾಖಾಧ್ಯಕ್ಷ ದೇವೇಂದ್ರ, ಚನ್ನಪಟ್ಟಣ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಮಂಜು, ನಗರಸಭೆ ಪರಿಸರ ಎಂಜಿನಿಯರ್ ಸ್ನೇಹಾ, ಎಇಇ ಪುಷ್ಪಾ, ಎಇಗಳಾದ ಜಯಣ್ಣ, ಗಂಗಾಧರ್, ಆರೋಗ್ಯ ನಿರೀಕ್ಷಕಿ ಕುಸುಮಾ, ಲೆಕ್ಕ ಪರಿಶೋಧಕ ಚಂದ್ರು, ಪೌರಕಾರ್ಮಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-14-2116057532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.