ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ | ಆರ್‌ಪಿಐ ಅಭ್ಯರ್ಥಿ ಕಣಕ್ಕೆ ನಿರ್ಧಾರ

ಚನ್ನಪಟ್ಟಣ ಉಪಚುನಾವಣೆ
Published : 25 ಸೆಪ್ಟೆಂಬರ್ 2024, 5:59 IST
Last Updated : 25 ಸೆಪ್ಟೆಂಬರ್ 2024, 5:59 IST
ಫಾಲೋ ಮಾಡಿ
Comments

ಚನ್ನಪಟ್ಟಣ: ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌.ಪಿಐ) ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ. ವೆಂಕಟಸ್ವಾಮಿ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡಲು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ.ಜಿ.ಗೋವಿಂದಯ್ಯ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿದೆ. ಶೀಘ್ರವೇ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ತಾಲ್ಲೂಕಿನಲ್ಲಿ ಹೋಬಳಿಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ ಶೀಘ್ರವೇ ಚನ್ನಪಟ್ಟಣದಲ್ಲಿ ಪಕ್ಷದ ವತಿಯಿಂದ ಸಮಾವೇಶ ನಡೆಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದರು.

ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ವೆಂಕಟರಮಣಪ್ಪ ಮಾತನಾಡಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಡಾ.ಬಿ.ಆರ್. ಅಂಬೇಡ್ಕರ್ ಅವರು ಸ್ಥಾಪಿಸಿದ ಪಕ್ಷ. ತಾಲ್ಲೂಕಿನಲ್ಲಿ ಅಂಬೇಡ್ಕರ್ ಅಭಿಮಾನಿಗಳು, ಕಲಾವಿದರು, ಪ್ರಜ್ಞಾವಂತರು ಸಾಕಷ್ಟು ಸಂಖ್ಯೆಯಲ್ಲಿದ್ದು, ಅಂಬೇಡ್ಕರ್ ಅವರ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಇವರೆಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸ ಇದೆ ಎಂದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಮೈತ್ರಿ ಪಕ್ಷವಾಗಿದೆ. ಈ ಬಗ್ಗೆ ಚಿಂತಿಸಿ, ಚರ್ಚಿಸಿ, ನಮ್ಮ ಕೆಲವು ಬೇಡಿಕೆಗಳಿಗೆ ಒಪ್ಪಿದರೆ ಮೈತ್ರಿ ಬಗ್ಗೆ ಆಲೋಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಚಕ್ಕೆರೆ ಲೋಕೇಶ್, ಪದಾಧಿಕಾರಿಗಳಾದ ಲಕ್ಷ್ಮಣ್, ಬನಶಂಕರಿ ನಾಗು, ಅಪ್ಪಗೆರೆ ಶ್ರೀನಿವಾಸ್ ಮೂರ್ತಿ, ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT