ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ಬಲಿದಾನ ದಿನ: ಪಂಜಿನ ಮೆರವಣಿಗೆ

Published 25 ಮಾರ್ಚ್ 2024, 8:23 IST
Last Updated 25 ಮಾರ್ಚ್ 2024, 8:23 IST
ಅಕ್ಷರ ಗಾತ್ರ

ಚನ್ನಪಟ್ಟಣ: ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಬಲಿದಾನದ ಅಂಗವಾಗಿ ಶನಿವಾರ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಬಲಿದಾನ ದಿನಾಚರಣೆ ಆಚರಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ನೇತೃತ್ವದಲ್ಲಿ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ಸಿ.ಪಿ.ಯೋಗೇಶ್ವರ್ ಮಾತನಾಡಿ, ಭಗತ್ ಸಿಂಗ್ ಅವರ ತ್ಯಾಗ ಬಲಿದಾನ ಇಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದರು. ತಾಲ್ಲೂಕ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ತೂಬಿನಕೆರೆ ರಾಜು, ನಗರ ಘಟಕದ ಅಧ್ಯಕ್ಷ ಶಿವು, ಜಯರಾಮು, ಶಿವಲಿಂಗಯ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT