ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ‘ಪಕ್ಷ ಬಿಟ್ಟವರು ಸಿಪಿವೈ ವಿರುದ್ಧ ಮಾತಾಡಬಾರದು’

Published 27 ಮಾರ್ಚ್ 2024, 7:17 IST
Last Updated 27 ಮಾರ್ಚ್ 2024, 7:17 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಬಿಜೆಪಿಯಲ್ಲಿ ಇದ್ದು ಅಧಿಕಾರ ಅನುಭವಿಸಿ, ಸದ್ಯ ಪಕ್ಷ ತೊರೆದಿರುವ ಕೆಲವು ಸ್ಥಳೀಯ ಮುಖಂಡರು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ’ ಎಂದು ಬಿಜೆಪಿ ತಾಲ್ಲೂಕು ಗ್ರಾಮಾಂತರ ಮಂಡಲ ಅಧ್ಯಕ್ಷ ತೂಬಿನಕೆರೆ ರಾಜು ಎಚ್ಚರಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ‘ಯೋಗೇಶ್ವರ್ ಅವರ ಕೃಪೆಯಿಂದ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಾಂಪುರ ಮಲುವೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದ ಹರೂರು ರಾಜಣ್ಣ, ಮುಖಂಡರಾಗಿದ್ದ ಸಿಂಗರಾಜಿ ಪುರ ರಾಜಣ್ಣ ಅವರು ಈಗ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರ ಮಾಡಿ ಯೋಗೇಶ್ವರ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಈ ಕೂಡಲೇ ತಮ್ಮ ಹೇಳಿಕೆಗಳನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ ಮಾತನಾಡಿ, ‘ಪಕ್ಷದಿಂದ ಹೊರಹೋದವರು ಪಕ್ಷದ ನಾಯಕರ ಬಗ್ಗೆ ಮಾತನಾಡುವ ಯೋಗ್ಯತೆ ಉಳಿಸಿಕೊಂಡಿಲ್ಲ. ಪಕ್ಷಾಂತರ ಅವರ ವೈಯಕ್ತಿಕ ವಿಚಾರ. ಪಕ್ಷದಿಂದ ಹೊರಹೋದ ನಂತರ ಈ ಹಿಂದಿನ ಪಕ್ಷದ ನಾಯಕರ ಬಗ್ಗೆ ಕೆಳಮಟ್ಟದ ಹೇಳಿಕೆ ನೀಡುವುದು ಸರಿಯಲ್ಲ. ನಮ್ಮ ನಾಯಕರ ಬಗ್ಗೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದದರು.

ನಗರ ಘಟಕದ ಅಧ್ಯಕ್ಷ ಶಿವಕುಮಾರ್, ಎಸ್.ಲಿಂಗೇಶ್ ಕುಮಾರ್, ಕೂಡ್ಲೂರು ಪುಟ್ಟಸ್ವಾಮಿ, ಸಿ.ಪಿ.ನಾಗೇಶ್, ರಾಂಪುರ ರಾಜಣ್ಣ, ಹನುಮಂತೇಗೌಡ, ಕೆಲಗೆರೆ ಜಯರಾಂ, ವಿ.ಬಿ. ಚಂದ್ರು ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT