ರಾಮನಗರ: ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡುಬರುವ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಬಾಲ ಕಾರ್ಮಿಕ ರಹಿತ ಜಿಲ್ಲೆಯನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಹೋಟೆಲ್ಗಳು, ಇಟ್ಟಿಗೆ ಗೂಡುಗಳು ಸೇರಿದಂತೆ ವಿವಿದೆಡೆ ಬಾಲ ಕಾರ್ಮಿಕರು ಕಂಡುಬರುತ್ತಾರೆ. ಇಂತಹ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿ ಅವರಿಗೆ ಶಿಕ್ಷಣ ಕೊಡಿಸುವ ಕೆಲಸವನ್ನು ಮಾಡಬೇಕು’ ಎಂದರು.

‘ಜೂನ್ 12ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದ ಆಚರಣೆಯನ್ನು ಮಾಡಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾ ಪಂಚಾಯತ್ವರೆಗೆ ಜಾಥಾ ಹಮ್ಮಿಕೊಳ್ಳಬೇಕು. ಜಾಥಾದಲ್ಲಿ ಎನ್ಎಸ್ಎಸ್ ಹಾಗೂ ಎನ್ಸಿಸಿ ಘಟಕಗಳ ವಿದ್ಯಾರ್ಥಿಗಳನ್ನು ಒಳಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-14-1512656393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.