ರಾಮನಗರ: 2026-27ನೇ ಸಾಲಿನಲ್ಲಿ ಜಿಲ್ಲಾ ಬಾಲ ಭವನ ಸೊಸೈಟಿ ವತಿಯಿಂದ 5ರಿಂದ 16 ವರ್ಷದ ಮಕ್ಕಳಿಗೆ ಮೇ 13ರಿಂದ 29ರವರೆಗೆ ಉಚಿತವಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. ರಾಮನಗರದ ವಿಜಯನಗರದ ಡಾ. ರಾಜಕುಮಾರ್ ರಸ್ತೆಯ 4ನೇ ಕ್ರಾಸ್ನಲ್ಲಿರುವ ಸ್ತ್ರೀ ಶಕ್ತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ 15 ದಿನ ಯೋಗ, ಧ್ಯಾನ, ಕರಾಟೆ, ಚಿತ್ರಕಲೆ, ಕೇರಂ, ಚೆಸ್, ಸಮೂಹ ಗೀತೆ, ಸಮೂಹ ನೃತ್ಯ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಬಗ್ಗೆ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು ಮೇ 11ರೊಳಗೆ ಜಿಲ್ಲಾ ಪಂಚಾಯತ್ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬೇಕು. ಮೊದಲು ಬಂದ 60 ಮಕ್ಕಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-29524996, 8147208605, 7760892291, 9980031129 ಸಂಪರ್ಕಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-14-2007881814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.