ರಾಮನಗರ: ತಾಲ್ಲೂಕಿನ ಸುಗ್ಗನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸುಗ್ಗನಹಳ್ಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರ್ಪಿತ ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ’ ಎಂದರು.

ಸಿ.ಆರ್.ಪಿ ರೇಣುಕಾ ಮಾತನಾಡಿ, ‘ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ತಂದೆ–ತಾಯಿ ಮತ್ತು ಶಿಕ್ಷಕರ ಶ್ರಮವೂ ಇದೆ. ಇಬ್ಬರೂ ಕೈ ಜೋಡಿಸಿದಾಗ ಮಾತ್ರ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಅತಿ ಮುಖ್ಯವಾಗಿದೆ. ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೆಕು’ ಎಂದು ಸಲಹೆ ನೀಡಿದರು.

ಶಿಕ್ಷಕ ಕೆ.ಟಿ. ಶಿವಕುಮಾರ್, ‘ಕ್ಲಸ್ಟರ್ ಮಟ್ಟದಲ್ಲಿ ವಿಜೇತರಾದವರು ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಅಲ್ಲಿ ಗೆದ್ದವರು ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಅವಕಾಶ ಪಡೆಯುತ್ತಾರೆ. ಆದ್ದರಿಂದ ಯಾವುದೇ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭೆಯನ್ನು ನಿಷ್ಪಕ್ಷಪಾತವಾಗಿ ಗುರುತಿಸಿ, ಪ್ರಶಸ್ತಿಯನ್ನು ತೀರ್ಮಾನಿಸಲಾಗುತ್ತದೆ’ ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗೋವಿಂದರಾಜ್, ಮುಖಂಡ ಚಿಕ್ಕಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಗಂಗಾಧರ್, ದಾನಿಗಳಾದ ನಿವೃತ್ತ ಪೊಲೀಸ್ ಬಸವರಾಜು, ವಕೀಲ ಹರೀಶ್ ಕುಮಾರ್, ಪ್ರಭಾರ ಮುಖ್ಯ ಶಿಕ್ಷಕ ಸೋಮೇಶ್, ವಿ. ಜಯರಾಮಯ್ಯ, ರವಿ ,ಮಧು ,ಗೌರಮ್ಮ , ಅಶ್ವಿನಿ, ಉಮೇಶ್, ಪುಟ್ಟಸ್ವಾಮಿ, ಕಿರಣ್ ತಳವಾರ್, ರುದ್ರೇಶ್, ಕ್ಲಸ್ಟರ್ ಮಟ್ಟದ ಶಿಕ್ಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಇದ್ದರು.