ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ | 'ಮಕ್ಕಳ ಪ್ರತಿಭೆ ಗುರುತಿಸಲು ಸಲಹೆ'

ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಸಾಪ ಸನ್ಮಾನ
Published : 14 ಸೆಪ್ಟೆಂಬರ್ 2024, 6:43 IST
Last Updated : 14 ಸೆಪ್ಟೆಂಬರ್ 2024, 6:43 IST
ಫಾಲೋ ಮಾಡಿ
Comments

ರಾಮನಗರ: ‘ಪೋಷಕರು ತಮ್ಮ ಮಕ್ಕಳನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸದೆ, ಅವರಲ್ಲಿ ಅಡಗಿರುವ ‍ಪಠ್ಯೇತರ ಪ್ರತಿಭೆಯನ್ನು ಸಹ ಗುರುತಿಸಬೇಕು. ಆರಂಭದಲ್ಲೇ ಅವರಲ್ಲಿರುವ ಪ್ರತಿಭೆ ಗುರುತಿಸಿ ಪೋಷಿಸಿದರೆ, ಮುಂದೆ ಅದರಲ್ಲೇ ಸಾಧನೆ ಮಾಡಬಹುದು’ ಎಂದು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಆರ್.ಕೆ. ಬೈರಲಿಂಗಯ್ಯ ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಗರದ ಹೋಲಿ ಕ್ರೆಸೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕಿನ ಸಾಧಕರಿಗೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಟಿ. ನಾಗೇಶ್ ಮಾತಾಡಿ, ‘ನಮ್ಮ ನಾಡು–ನುಡಿ ಹಾಗೂ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರುಗಳನ್ನು ಈಗಲೇ ನಾವು ಸಿದ್ದಪಡಿಸಬೇಕಾಗಿದೆ. ಕನ್ನಡ ಕಟ್ಟುವ ಕೆಲಸಕ್ಕೆ ಇಂದಿನ ವಿದ್ಯಾರ್ಥಿಗಳು ಕೈ ಜೋಡಿಸಬೇಕಾಗಿದೆ. ಕೇವಲ ಅಂಕಗಳಿಗೆ ಸೀಮಿತವಾಗದೆ ಮುಂದಿನ ದಿನಗಳಲ್ಲಿ ಕನ್ನಡಕ್ಕಾಗಿ ಕೆಲಸ ಮಾಡಬೇಕಾಗಿದೆ’ ಎಂದರು .

ಅಧ್ಯಕ್ಷತೆ ವಹಿಸಿದ್ದ ಹೋಲಿ ಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಅಲ್ತಾಫ್ ಅಹಮದ್, ‘ಖಾಸಗಿ ಶಾಲೆಗಳಲ್ಲಿ ಕನ್ನಡ ಕಡೆಗಣಿಸಲಾಗುತ್ತಿದೆ. ಬೇರೆ ವಿಷಯಗಳಿಗೆ ಕೊಟ್ಟಷ್ಟೆ ಮಹತ್ವವವನ್ನು ಕನ್ನಡಕ್ಕೆ ಕೊಟ್ಟಾಗ ಮಾತ್ರ ಕನ್ನಡ ಅಜರಾಮರವಾಗುತ್ತದೆ. ಆನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ನವೆಂಬರ್‌ನಲ್ಲಿ ಅದ್ದೂರಿಯಾಗಿ ಕನ್ನಡ ರಾಜೋತ್ಸವ ಆಚರಿಸಲಾಗುತ್ತದೆ’ ಎಂದು ತಿಳಿಸಿದರು.

ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಿ.ಟಿ. ದಿನೇಶ್ ಬಿಳಗುಂಬ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಫ್ರೌಡಶಾಲೆಗಳ ಹತ್ತು ಕನ್ನಡ ಶಿಕ್ಷಕರು, ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಪಿಎಲ್‌ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್. ಮಲ್ಲೇಶ್, ಪರಿಷತ್ತಿನ ಗೌರವ ಕಾರ್ಯದರ್ಶಿ ಅರುಣ್ ಕವಣಾಪುರ, ಕಿರಣ್ ಎನ್., ಕೋಶಾಧ್ಯಕ್ಷ ನಂಜುಂಡಪ್ಪ ಬಿ.ಕೆ, ಸಾಹಿತಿಗಳಾದ ಜಿ.ಎಚ್. ರಾಮಯ್ಯ, ವನರಾಜು, ಕರೀಗೌಡ , ರಾಮಕೃಷ್ಣ ಡಿ., ಸ್ಟ್ಯಾನ್ಲಿ ಪಾಲ್ ಡೈರಿ ವೆಂಕಟೇಶ್, ಮಹಾದೇವು ಲಕ್ಕಸಂದ್ರ, ದೇವರಾಜು ಕ್ಯಾಸಾಪುರ, ಬಿ.ಟಿ.ರಾಜೇಂದ್ರ, ಸಮದ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT