ರಾಮನಗರ: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಇಂಡಿಯನ್ ಕೌನ್ಸಿಲ್ ಕಲ್ಚರ್ ರಿಲೇಷನ್ಸ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಾಂಸ್ಕೃತಿಕ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಐಸಿಸಿಆರ್ ಸಂಸ್ಥೆ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಳಿಗೆ ಕಳುಹಿಸಿ ಕೊಡುವ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಶವಾಗುತ್ತದೆ.

ರಾಜ್ಯದಲ್ಲಿನ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೂನ್ 12ರೊಳಗೆ ನೋಂದಣಿಯಾಗಬೇಕು. ಅರ್ಜಿಯನ್ನು ಇಲಾಖೆ ವೆಬ್ಸೈಟ್ www.kannadasiri.karnataka.gov.in ನಲ್ಲಿ ಹಾಗೂ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿರುವ ಕಚೇರಿ ಸಂಪರ್ಕಿಸಬೇಕು ಎಂದು ಇಲಾಖೆ ಸಹಾಯಕ ನಿರ್ದೇಶಕ ಕೆ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-14-1647532526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.