ರಾಮನಗರ: ತಾಲ್ಲೂಕಿನ ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದ ದಾಸೋಹ ಮಠದಲ್ಲಿ ಜೂನ್ 27 ಮತ್ತು 28ರಂದು ಬಸವಲಿಂಗರಾಜ ಸ್ವಾಮೀಜಿ ಅವರ ಪ್ರಥಮ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮ ಮತ್ತು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಮಠದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಪೋಸ್ಟರ್ ಅನ್ನು ಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ‘ಲಿಂಗೈಕ್ಯ ಬಸವಲಿಂಗರಾಜ ಸ್ವಾಮೀಜಿ ಅವರು ಮಠದ ಅಭಿವೃದ್ಧಿಗೆ ಶ್ರಮಿಸಿದ್ದರು. ದಾಸೋಹ ಪರಂಪರೆ ಮುಂದುವರೆಸುತ್ತಾ ನಾಡಿನೆಲ್ಲೆಡೆ ಹೆಸರಾಗಿದ್ದರು. ಅವರ ಪುಣ್ಯಸ್ಮರಣೆಯನ್ನು ಸಾಮಾಜಿಕ ಸೇವಾ ಕಾರ್ಯಗಳೊಡನೆ ನೆರವೇರಿಸಲು ಮಠದ ಭಕ್ತರು ತೀರ್ಮಾನಿಸಿದ್ದಾರೆ. ಅದರಂತೆ ಜೂನ್ 27 ಮತ್ತು 28ರಂದು ಕಾರ್ಯಕ್ರಮ ನಡೆಯಲಿದೆ’ ಎಂದರು.

‘27ರಂದು ಸಾಮೂಹಿಕ ಲಿಂಗದೀಕ್ಷೆ ಕಾರ್ಯಕ್ರಮ, ರಕ್ತದಾನ ಶಿಬಿರ, ಆರೋಗ್ಯ ಶಿಬಿರ ನಡೆಯಲಿದೆ. 28ರಂದು ಉಚಿತ ಸಾಮೂಹಿಕ ವಿವಾಹ ಮತ್ತು ಧಾರ್ಮಿಕ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಾಳೇಹೊನ್ನೂರಿನ ಪ್ರಸನ್ನ ರೇಣುಕ ವೀರ ಸೋಮೇಶ್ವರ ಸ್ವಾಮೀಜಿ, ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ನಾಡಿನ ಹರಗುರು ಚರಮೂರ್ತಿಗಳು ಹಾಗೂ ವಿವಿಧ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಸ್. ಯೋಗಾನಂದ ಮಾತನಾಡಿ, ‘ಮಠದ ಆವರಣದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಲಿದೆ. ವಧು-ವರರಿಗೆ ಮಠದಿಂದ ಚಿನ್ನದ ಮಂಗಳಸೂತ್ರ, ಬೆಳ್ಳಿ ಕಾಲುಂಗುರ, ಸೀರೆ, ಶರ್ಟ್, ಪಂಚೆ, ಟವಲ್ ನೀಡಲಾಗುತ್ತದೆ. ವಿವಾಹವಾಗುವವರು ಜೂನ್ 10ನೇ ತಾರೀಖಿನೊಳಗೆ ಸೂಕ್ತ ದಾಖಲಾತಿಗಳೊಡನೆ ಮಠದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು’ ಎಂದರು.

ಮಹಾಸಭಾ ತಾಲ್ಲೂಕು ಅಧ್ಯಕ್ಷ ಪೋಲೀಸ್ ಶಂಕರಪ್ಪ, ದಾಸೋಹ ಮಠದ ಅಭಿವೃದ್ಧಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಜಣ್ಣ, ಮುಖಂಡ ಅವ್ವೇರಹಳ್ಳಿ ಶಿವಲಿಂಗಯ್ಯ, ಕನಕಪುರ ಕೈಲಾಶ್ ಮಾತನಾಡಿದರು. ನಗರಸಭೆ ಸದಸ್ಯ ರವೀಶ್, ಜಿಲ್ಲಾ ಕಾನಿಪ ಅಧ್ಯಕ್ಷ ಶಿವಲಿಂಗಯ್ಯ ವಿಭೂತಿಕೆರೆ, ಕರುನಾಡ ಸೇನೆ ಉಪಾಧ್ಯಕ್ಷ ಐಜೂರು ಜಗದೀಶ್, ಮುಖಂಡರಾದ ಆರ್. ಪಾಂಡುರಂಗ, ಜನತಾ ನಾಗೇಶ್, ಅವ್ವೇರಹಳ್ಳಿ ತಮ್ಮಣ್ಣ, ನಂದೀಶ್ಗೌಡ, ಮಹದೇವಯ್ಯ, ಬಿಡದಿ ಶಿವಸ್ವಾಮಿ, ನೆಲಮಲೆ ಗಂಗಾಧರ್, ರಾ.ಶಿ. ಬಸವರಾಜು ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-14-670722308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.