ರಾಮನಗರ: ಕರ್ನಾಟಕ ಪ್ರವಾಸ ಕೈಗೊಂಡಿರುವ ನೆರೆಯ ತೆಲಂಗಾಣ ರಾಜ್ಯದ 44 ಪ್ರೊಬೆಷನರಿ ಜಿಲ್ಲಾಧಿಕಾರಿಗಳು ಶುಕ್ರವಾರ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರನ್ನು ಭೇಟಿ ಮಾಡಿ, ವೃತ್ತಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಪಡೆದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಈ ವೇಳೆ, ಜಿಲ್ಲೆಯಲ್ಲಿ ಕೈಗೊಂಡಿರುವ ಭೂ ದಾಖಲೆಗಳ ನಿರ್ವಹಣೆ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಸಮೀಕ್ಷೆ, ಕಂದಾಯ ಮತ್ತು ನೋಂದಣಿ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.

ಜಿಲ್ಲೆಯ ಭೂ ದಾಖಲೆಗಳ ನಿರ್ವಹಣೆಯಲ್ಲಿ ಅನುಸರಿಸಲಾಗುತ್ತಿರುವ ನೂತನ ವಿಧಾನಗಳು ಸೇರಿದಂತೆ ಜಿಲ್ಲೆಯ ಕಂದಾಯ ಇಲಾಖೆಗಳ ನಿರ್ವಹಣೆ, ಕಾರ್ಯವೈಖರಿ ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಿ ಕಾಲ ಮಿತಿಯೊಳಗೆ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸುವ ಬಗ್ಗೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಮಾರ್ಗದರ್ಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ರಾಮನಗರ ತಹಶೀಲ್ದಾರ್ ತೇಜಸ್ವಿನಿ, ಉಪ ನೋಂದಣಾಧಿಕಾರಿ ಶ್ರೀದೇವಿ, ಡಿಡಿಎಲ್ಆರ್ ಹನುಮೇಗೌಡ, ಭೂಮಿ ಮೇಲ್ವಿಚಾರಣಾ ಕೋಶದ ಉಪ ತಹಶೀಲ್ದಾರ್ ಅರುಣ್ ಸಾಗರ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-14-1436584487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.