ರಾಮನಗರ: ಹಲವು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿರುವ ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯ ಸಹಿಸಲಾಗದ ಕೆಲವರು ಅರ್ಕಾವತಿ ನದಿ ದಂಡೆ ಅಭಿವೃದ್ಧಿ ವಿಚಾರದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಹಿಂದುಳಿದ ವರ್ಗದ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು ಆರೋಪಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರಸಭೆ ಸದಸ್ಯರು ಅರ್ಕಾವತಿ ನದಿ ದಂಡೆ ಅಭಿವೃದ್ಧಿ ವಿಚಾರದಲ್ಲಿ ವಿರೋಧಾತ್ಮಕ ತೀರ್ಮಾನ ಕೈಗೊಂಡಿದ್ದಾರೆ. ನಗರಸಭೆ ಅಧ್ಯಕ್ಷರು ಅಭಿವೃದ್ಧಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಬೇಕಿತ್ತು. ಪಾರ್ಕ್ ನಿರ್ಮಾಣದಿಂದ ದೇವಾಲಯ, ದರ್ಗಾ ಮತ್ತು ರಾಘವೇಂದ್ರ ಕಾಲೊನಿಗೆ ತೊಂದರೆಯಾಗಲಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಹೇಳಿದರು.

‘ಅರ್ಕಾವತಿ ನದಿ ಅಭಿವೃದ್ಧಿ ವಿಚಾರದಲ್ಲಿ ವಿರೋಧ ಪಕ್ಷದವರು ವಿರೋಧಿಸಬೇಕಿತ್ತು. ಆದರೆ, ಯಾರೂ ಈ ಬಗ್ಗೆ ಪ್ರಶ್ನಿಸಲಿಲ್ಲ. ನಮ್ಮದೇ ಪಕ್ಷ ಅಧಿಕಾರದಲ್ಲಿರುವ ನಗರಸಭೆ, ಅಭಿವೃದ್ಧಿ ಕಾರ್ಯದ ವಿರುದ್ಧ ನಿರ್ಣಯ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ನರಸಿಂಹ ಮಾತನಾಡಿ, ಯಾರೂ ಅರ್ಜಿ ಕೊಡದಿದ್ದರೂ ‘ಅರ್ಜಿ ಕೊಡಿ’ ಎಂದು ಕೇಳಿಕೊಂಡು ವಿವಾದ ಸೃಷ್ಟಿಸಲಾಗುತ್ತಿದೆ. ಹೋರಾಟಕ್ಕೆ ಸಿದ್ಧ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ನಾವು ಸಹ ಇದಕ್ಕೆ ವಿರುದ್ಧವಾಗಿ ಹೋರಾಡಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಅಕೇಶ್ವರಸ್ವಾಮಿ ದೇವಾಲಯ, ದರ್ಗಾ ಮತ್ತು ರಾಘವೇಂದ್ರ ಕಾಲೊನಿ ಅಂತಿಮ ಅಧಿಸೂಚನೆಯಿಂದ ಕೈಬಿಡಿಸಲಾಗುವುದು ಎಂದು ತಿಳಿಸಿದರು.

ಮುಖಂಡ ಶಿವಲಿಂಗಯ್ಯ ಮಾತನಾಡಿದರು. ನಗರಸಭೆ ಸದಸ್ಯ ಅಣ್ಣು, ಮುಖಂಡರಾದ ರವಿ, ಶಿವಶಂಕರ್, ಕುರುಬರಹಳ್ಳಿ ದೇವರಾಜ್, ಗುಡ್ಡೆ ವೆಂಕಟೇಶ್, ಗೋಪಾಲ್, ಪ್ರಸನ್ನ, ಪಾಪಣ್ಣ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-14-657193774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.