ಭಾನುವಾರ, ಆಗಸ್ಟ್ 14, 2022
28 °C

ರಾಮನಗರ: ಬೀಗರೂಟ ತಿಂದ ನೂರಾರು ಮಂದಿ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮೋಳೆದೊಡ್ಡಿ ಗ್ರಾಮದಲ್ಲಿ ಬೀಗರೂಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಮದುವೆ ನೆರವೇರಿದ್ದು, ಮಂಗಳವಾರ ಬೀಗರಿಗಾಗಿ ಮೋಳೆದೊಡ್ಡಿಯಲ್ಲಿ ಔತಣ ಕೂಟ ನಡೆಯಿತು. ಇಲ್ಲಿ ಊಟ ಮಾಡಿದವರ ಪೈಕಿ 150-200 ಮಂದಿ ರಾತ್ರಿ ವೇಳೆಗೆ ವಾಂತಿ-ಭೇದಿಯಿಂದಾಗಿ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಆರೋಗ್ಯಾಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು