ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಹಸಿರು ನಿಶಾನೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತವರು ಜಿಲ್ಲೆಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಇಲ್ಲಿನ ಐಜೂರು ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ಪಕ್ಷದ ಯುವ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ‘ಡಿ.ಕೆ... ಡಿ.ಕೆ...’ ಎಂದು ಘೋಷಣೆ ಕೂಗಿ ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ರಾಜ್ಯದಲ್ಲಿ ಪಕ್ಷಕ್ಕಾಗಿ ಅವಿರತವಾಗಿ ದುಡಿದು ಅಧಿಕಾರಕ್ಕೆ ತಂದಿರುವ ಜನ ನಾಯಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಪ್ರಾರ್ಥನೆ ಕಡೆಗೂ ಫಲಿಸಿದೆ ಎಂದು ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ವಿ.ಚಂದ್ರಸಾಗರ್ ಹರ್ಷ ವ್ಯಕ್ತಪಡಿಸಿದರು.

‘ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ಎಷ್ಟೋ ಮಂದಿ ಹರಕೆ ಹೊತ್ತಿದ್ದರು. ಅದು ಸಾಕಾರವಾಗುವ ದಿನ ಬಂದಿದೆ. ನಮ್ಮ ನಾಯಕ ಸಿ.ಎಂ ಆಗಿ ಪ್ರಮಾಣವಚನ ಸ್ವೀಕರಿಸುವುದನ್ನುಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-51-2010968826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.