ರಾಮನಗರ: ‘ನಮ್ಮ ಜಿಲ್ಲೆಯ ಹೆಮ್ಮೆಯ ಪುತ್ರನಾದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೇರುವ ಮೂಲಕ, ನಮ್ಮೆಲ್ಲರ ಪ್ರಾರ್ಥನೆ ಫಲ ಕೊಟ್ಟಿದೆ. ಈ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದೆವು. ಶಿವಕುಮಾರ್ ಅವರ ಅವಧಿಯಲ್ಲಿ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ಸಿಗಲಿದೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

‘ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಜನಪ್ರಿಯ ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತಷ್ಟು ಅಭಿವೃದ್ಧಿ ಯೋಜನೆಗಳಿಗೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ’ ಎಂದು ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ದೇಶದ ರಾಜಕಾರಣದಲ್ಲಿ ಶಿವಕುಮಾರ್ ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷಕ್ಕಾಗಿ ಮಾಡಿರುವ ತ್ಯಾಗ ಮತ್ತು ಹಾಕಿರುವ ಶ್ರಮಕ್ಕೆ ಈಗ ತಕ್ಕ ಪ್ರತಿಫಲ ಸಿಕ್ಕಿದೆ. ಅಭಿವೃದ್ಧಿಯ ವಿಷಯದಲ್ಲಿ ಹೆಚ್ಚಿನ ದೂರದೃಷ್ಟಿ ಹೊಂದಿರುವ ಅವರು ರಾಜ್ಯವನ್ನು ಸಮರ್ಥವಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಾಗಿವೆ. ನನೆಗುದಿಗೆ ಬಿದ್ದಿದ್ದ ರಾಜೀವ್ ಗಾಂಧಿ ಆರೋಗ್ಯ ವಿ.ವಿ ಕಟ್ಟಡ ನಿರ್ಮಾಣ ಕೆಲಸ ಭರದಿಂದ ಸಾಗಿದೆ. ಅರ್ಕಾವತಿ ಉದ್ಯಾನ ಅಭಿವೃದ್ಧಿ ಕಾಮಗಾರಿ ಶುರುವಾಗಿದೆ. ಬಡವರಿಗೆ ನಿವೇಶನ ಹಂಚಿಕೆಗೆ 300 ಎಕರೆ ಗುರುತಿಸಲಾಗಿದೆ. ಕೆಪಿಎಸ್ಸಿ ಶಾಲೆಗಳನ್ನು ಆರಂಭಿಸಲಾಗಿದೆ’ ಎಂದರು.

‘ಮಂಚನಬೆಲೆ ನಾಲೆ ದುರಸ್ತಿ ಮಾಡಿ, ನೀರು ಸಹ ಹರಿಸಲಾಗಿದೆ. ಹಾರೋಹಳ್ಳಿ ಮತ್ತು ಮುದುವಾಡಿಗೂ ಕಾವೇರಿ ನೀರು ಸಿಗಲಿದೆ. ರಾಮನಗರ ತಾಲ್ಲೂಕಿನ ಕಾಳೇಗೌಡನದೊಡ್ಡಿಯಲ್ಲಿ ಏತ ನೀರಾವರಿ ಕಾಮಗಾರಿ ಮುಗಿಯುತ್ತಾ ಬಂದಿದೆ. ಕೈಲಾಂಚ ಮತ್ತು ಕಸಬಾ ಹೋಬಳಿ ಸೇರಿದಂತೆ ಹಾರೋಹಳ್ಳಿಯ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಂಡಿದ್ದೇವೆ’ ಎಂದು ತಿಳಿಸಿದರು.

‘ನಗರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಸಾರಿಗೆ ಇಲಾಖೆಗೆ ಪ್ರಸ್ತಾವ ಕಳಿಸಿದ್ದೇನೆ. ಜಿಲ್ಲಾ ಕೋರ್ಟ್ ಸಂಕೀರ್ಣ ನಿರ್ಮಾಣಕ್ಕೆ ಜಾಗ ಹಸ್ತಾಂತರ ಮಾಡಲಾಗಿದೆ. ಐಜೂರು ವೃತ್ತದ ಸೌಂದರ್ಯೀಕರಣಕ್ಕೂ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ ₹300 ಕೋಟಿಗೆ ಬೇಡಿಕೆ ಇಟ್ಟಿದ್ದೇನೆ. ಇದೀಗ ನಮ್ಮವರೇ ಸಿ.ಎಂ ಆಗಿರುವುದರಿಂದ ಸ್ಪಂದನೆ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಮುಖಂಡರಾದ ಗುರುಪ್ರಸಾದ್, ರವಿ, ಮಹೇಶ್, ಶಿವಲಿಂಗಯ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-14-799606112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.