ಚನ್ನಪಟ್ಟಣ: ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಬಗ್ಗೆ ಭರವಸೆ ನೀಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದ ಅಂಚಿನಲ್ಲಿ ಟ್ರಂಚ್ ನಿರ್ಮಾಣ, ರೈಲ್ವೆ ಬ್ಯಾರಿಕೇಡ್ ಹಾಕುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಆ ಭರವಸೆ ಈಡೇರಿಸಲೇ ಇಲ್ಲ ಎಂದರು.

‘ಕಾಡಾನೆ ಹಾವಳಿ ಬಗ್ಗೆ ಮೂರರಿಂದ ನಾಲ್ಕು ಬಾರಿ ಖಂಡ್ರೆ ಅವರಿಗೆ ದೂರು ನೀಡಿದ್ದೇನೆ. ಇಲಾಖೆಯಿಂದ ಕ್ರಮ ವಹಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅರಣ್ಯದ ಅಂಚಿನಲ್ಲಿ ಟ್ರಂಚ್ ಹಾಗೂ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಆಗದಿದ್ದರೆ ಆನೆಗಳ ಹಾವಳಿ ತಪ್ಪುವುದಿಲ್ಲ. ಈ ಬಗ್ಗೆ ಮನವಿ ಮಾಡಿದ್ದರೂ ಕ್ರಮವಹಿಸದೆ ಇರುವುದು ನೋವಾಗಿದೆ. ನಮ್ಮ ಪ್ರಯತ್ನಕ್ಕೆ ಯಾವುದೇ ಫಲ ಸಿಗುತ್ತಿಲ್ಲ’ ಎಂದರು.

‘ಈ ವಿಷಯವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಮನಕ್ಕೆ ತರುತ್ತೇನೆ.ಸಚಿವ ಖಂಡ್ರೆ ಜೊತೆ ಶೀಘ್ರದಲ್ಲಿಯೇ ಕಾಡಾನೆ ಸಮಸ್ಯೆ ಬಗ್ಗೆ ವಿವರವಾಗಿ ಚರ್ಚಿಸುತ್ತೇನೆ. ಈ ಬಗ್ಗೆ ಕ್ಯಾಬಿನೆಟ್ನಲ್ಲಿ ತೀರ್ಮಾನ ಕೈಗೊಳ್ಳಲು ಮನವಿ ಮಾಡುತ್ತೇನೆ. ಕೇವಲ ಒಂದೆರಡು ಕಾಡಾನೆ ಸೆರೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-14-2058519844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.