ಕನಕಪುರ: ಬಿಡದಿ ಟೌನ್ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸುವಂತೆ ನಿರಂತರ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ರೈತರ ಸೋಗಿನಲ್ಲಿ ಕೆಲವರು ಪರಿಹಾರ ನೀಡುವಂತೆ ಒತ್ತಾಯಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದರೆ. ಇದು ರಾಜಕೀಯ ಪಿತೂರಿಯ ಭಾಗ ಎಂದು ರಾಜ್ಯ ರೈತ ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಭೂ ಮಾಲೀಕರು ಅಲ್ಲದ ಕೆಲವರು ರೈತರ ಹೋರಾಟದಲ್ಲಿ ಒಡಕು ಮೂಡಿಸಲು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶೀಘ್ರ ಭೂ ಸ್ವಾಧೀನ ಪ್ರಕ್ರಿಯೆ ಮುಗಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಮುಖಂಡ ಅನುಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ನಿರ್ಮಾಣದ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸುವಂತೆ ಬೈರಮಂಗಲ ಕಂಚುಗಾರನಹಳ್ಳಿ ರೈತರು ಹಗಲು, ರಾತ್ರಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂತಹ ವೇಳೆಯಲ್ಲಿ ಕೆಲವರು ಪಿತೂರಿ ಅರಂಭಿಸಿದ್ದಾರೆ ಎಂದರು.

ನಿಜವಾಗಿಯೂ ಇವರು ರೈತರಾಗಿದ್ದರೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದರು. ಇವರು ಖಂಡಿತ ಈ ಭಾಗದ ರೈತರು ಅಲ್ಲ. ಇವರೆಲ್ಲಾ ಕಾಂಗ್ರೆಸ್ ಪಕ್ಷದ ಏಜೆಂಟರು ಮತ್ತು ಬಂಡವಾಳಶಾಹಿಗಳ ಪರವಾಗಿರುವ ದಲ್ಲಾಳಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೋರಾಟ ದುರ್ಬಲಗೊಳಿಸಲು ಅಕ್ರಮ ಕೂಟ ಕಟ್ಟಿಕೊಂಡು ನಿರಂತರವಾಗಿ ರೈತ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಗ್ರೇಟರ್ ಬೆಂಗಳೂರು ಮತ್ತು ಮೋಜುಣಿ ಇಲಾಖೆ, ಸರ್ವೆ ಇಲಾಖೆ ಅಧಿಕಾರಿಗಳಿಗೆ ಬೆಂಗಾವಲಾಗಿ ರೈತರ ಅನುಮತಿ ಇಲ್ಲದೆ ಜಮೀನುಗಳಿಗೆ ನುಗ್ಗುವ ಪುಂಡರ ಗುಂಪು ಇದಾಗಿದೆ ಎಂದರು.

ರೈತರ ಪ್ರತಿಭಟನೆ ಹಾಗೂ ಹೋರಾಟವನ್ನು ಹತ್ತಿಕ್ಕಲು ರಾಜಕಾರಣಿಗಳು ಮತ್ತು ಜಿಲ್ಲಾಡಳಿತದ ಪರವಾಗಿ ಇರುವ ವ್ಯಕ್ತಿಗಳು ರೈತರ ಮುಖವಾಡ ಹಾಕಿಕೊಂಡು ಮನವಿ ಪತ್ರ ಸಲ್ಲಿಸಿದ್ದಾರೆ. ಇವರ ಮನವಿಯನ್ನು ಸರ್ಕಾರ ಪುರಸ್ಕರಿಸಬಾರದು ಎಂದು ಒತ್ತಾಯಿಸಿದರು.

ಭೂಸ್ವಾಧೀನ ಪ್ರಕ್ರಿಯೆ ಮುಂದುವರೆದರೆ ರೈತರು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದಲ್ಲಿ ಎಲ್ಲೂ ನೀಡದ ಪರಿಹಾರವನ್ನು ನೀಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಯಾರಿಗೆ ಬೇಕು ಅವರ ಪರಿಹಾರ? ಬೇಡವಾದ ಪರಿಹಾರವನ್ನು ಎಷ್ಟೇ ನೀಡಿದರೂ ಪ್ರಯೋಜನವಿಲ್ಲ. ರೈತರಿಗೆ ಬೇಕಿರುವುದು ಅವರ ಭೂಮಿ. ಇದನ್ನು ಅರಿತು ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಬೇರೆ ಪಕ್ಷದ ಸರ್ಕಾರದ ಸಂದರ್ಭದಲ್ಲಿ ನಡೆಯುವ ರೈತ ಹೋರಾಟಗಳಿಗೆ ಕಾಂಗ್ರೆಸ್ ಪಕ್ಷ ಬೆಂಬಲವಾಗಿ ನಿಲ್ಲುತ್ತದೆ. ಆದರೆ ತನ್ನದೆ ಸರ್ಕಾರದಲ್ಲಿ ರೈತರಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಹೆಚ್ಚಿನ ಪರಿಹಾರದ ಆಸೆ ತೋರಿಸಿ ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳಲು ಹೊರಟಿದೆ ಎಂದು ತಾಲ್ಲೂಕ ಅಧ್ಯಕ್ಷ ಶಿವಗೂಳಿಗೌಡ ಮತ್ತು ಕಾರ್ಯದರ್ಶಿ ಪುಟ್ಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಿಜವಾಗಿಯು ಕಾಂಗ್ರೆಸ್ ಪಕ್ಷವು ರೈತರ ಪರ ಸರ್ಕಾರವಾಗಿದ್ದರೆ ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ಕೃಷಿಯೋಗ್ಯವಾದ ಸಾವಿರಾರು ಎಕರೆ ಭೂಮಿಯನ್ನು ಭೂ ಸ್ವಾದೀನ ಪಡಿಸಿಕೊಳ್ಳದೆ ಕೈಬಿಡಬೇಕು, ರೈತರಿಗೆ ಭೂಮಿಯನ್ನು ಉಳಿಸಿ ಕೊಡಬೇಕೆಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-14-2031220065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.