ರಾಮನಗರ: ‘ರೈತರು ಸಮತೋಲನವಾದ ಗೊಬ್ಬರ ಬಳಕೆಗೆ ಆದ್ಯತೆ ನೀಡಬೇಕು. ಆಗ ಮಾತ್ರ ಭೂಮಿಯ ಮಣ್ಣಿನ ಆರೋಗ್ಯ ಕಾಪಾಡಲು ಹಾಗೂ ಉತ್ತಮವಾದ ಬೆಳೆ ಬೆಳೆಯಲು ಸಾಧ್ಯ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಅಂಬಿಕಾ ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಭವನದಲ್ಲಿರುವ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯ, ಅಖಿಲ ಭಾರತ ಸುಸಂಘಟಿತ ಖುಷ್ಕಿ ಬೆಳೆ ಪ್ರಯೋಜನ ಮತ್ತು ಕೇಂದ್ರ ಪುರಸ್ಕೃತ ಆತ್ಮ ಯೋಜನೆಯ ಸಹಯೋಗದಲ್ಲಿ ನಡೆದ ಸಮತೋಲನ ಗೊಬ್ಬರಗಳ ಬಳಕೆ ಕುರಿತ ವಿಶೇಷ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಡಾ. ವೆಂಕಟಗೌಡ, ‘ಮಣ್ಣಿನ ಆರೋಗ್ಯ ಕಾಪಾಡಲು ಹಸಿರೆಲೆ ಗೊಬ್ಬರಗಳ ಬಳಕೆ ಅತ್ಯಂತ ಉಪಯುಕ್ತ. ಹಸಿರೆಲೆ ಗೊಬ್ಬರಗಳು ಮಣ್ಣಿಗೆ ಅಗತ್ಯವಾದ ಸಾವಯವ ದ್ರವ್ಯವನ್ನು ಹೆಚ್ಚಿಸಿದಾಗ, ಮಣ್ಣಿನ ರಚನೆ ಸುಧಾರಿಸಲು ಸಹಾಯ ಮಾಡುತ್ತವೆ’ ಎಂದು ಹೇಳಿದರು.

‘ಹಸಿರೆಲೆ ಗೊಬ್ಬರ ಬೆಳೆಗಳಾದ ಅಪ್ಸೆಣಬು, ಚಂಬೆ, ಹುರಳಿ ಹಾಗೂ ಇತರ ಎಲ್ಲಾ ದ್ವಿದಳ ಧಾನ್ಯ ಬೆಳೆಗಳು ಮಣ್ಣಿನಲ್ಲಿ ನೈಸರ್ಗಿಕವಾಗಿ ನೈಟ್ರೋಜನ್ ಸ್ಥಿರೀಕರಣ ಮಾಡುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತವೆ. ಈ ಬೆಳೆಗಳನ್ನು 40-45 ದಿನಗಳಲ್ಲಿ ಬೆಳೆಸಿ, ನಂತರ ಮಣ್ಣಿನಲ್ಲಿ ಮಿಶ್ರಣ ಮಾಡಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ’ ಎಂದರು.

‘ಹಸಿರೆಲೆ ಗೊಬ್ಬರಗಳಲ್ಲಿ ಮುಖ್ಯವಾಗಿ ನೈಟ್ರೋಜನ್ ಅಂಶ ಹೆಚ್ಚು ಇರುವುದರ ಜೊತೆಗೆ, ಕೆಲವು ಪ್ರಮಾಣದಲ್ಲಿ ಫಾಸ್ಫರಸ್ ಮತ್ತು ಪೊಟಾಶ್ ಅಂಶಗಳೂ ಲಭ್ಯವಿರುತ್ತವೆ. ಉದಾಹರಣೆಗೆ, ಅಪ್ಸೆಣಬು ಬೆಳೆ ಹೆಚ್ಚು ನೈಟ್ರೋಜನ್ ಒದಗಿಸುವುದರಿಂದ ಮುಂದಿನ ಬೆಳೆಗಳಿಗೆ ಪೋಷಕಾಂಶಗಳ ಕೊರತೆ ಆಗುವುದಿಲ್ಲ’ ಎಂದು ತಿಳಿಸಿದರು.

ಡಾ. ವಾಸಂತಿ ಅವರು ಸಮತೋಲನ ಪೋಷಕಾಂಶಗಳ ಅಗತ್ಯತೆ ಕುರಿತು ಹಾಗೂ ಯೋಜನೆಯ ಮುಖ್ಯಸ್ಥ ಡಾ. ಮೂಡಲಗಿರಿಯಪ್ಪ ಅವರು ಮಣ್ಣಿನ ಆರೋಗ್ಯದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗದ ರೈತರುಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-14-69392518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.