ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಹಣಕ್ಕಾಗಿ ಜಗಳ– ಮಚ್ಚಿನಿಂದ ಹೊಡೆದು ಮಗನನ್ನು ಕೊಲೆ ಮಾಡಿದ ತಂದೆ!

ಕೃತ್ಯ ಎಸಗಿದ ತಂದೆ ಕೃಷ್ಣಪ್ಪನನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Published 18 ಮೇ 2024, 6:08 IST
Last Updated 18 ಮೇ 2024, 6:08 IST
ಅಕ್ಷರ ಗಾತ್ರ

ರಾಮನಗರ: ಹಣಕ್ಕಾಗಿ ತಂದೆಯೊಬ್ಬ ತನ್ನ ಮಗನನ್ನೇ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಭಾಸ್ಕರ್ (31) ಕೊಲೆಯಾಗಿದ್ದು, ಕೃತ್ಯ ಎಸಗಿದ ತಂದೆ ಕೃಷ್ಣಪ್ಪನನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಣಕ್ಕಾಗಿ ತಂದೆ–ಮಗನ ನಡುವೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಆಗ ಸಿಟ್ಟಿಗೆದ್ದ ಕೃಷ್ಣಪ್ಪ ಮಚ್ಚಿನಿಂದ ಮಗನ ಮುಖ ಮತ್ತು ತಲೆಗೆ ನಾಲ್ಕೈದು ಬಾರಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಘಟನೆ ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಕೃಷ್ಣಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT