ರಾಮನಗರ: ಅಗ್ನಿ ಅನಾಹುತ ಜೀವಹಾನಿ ಜೊತೆಗೆ ಇಡೀ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ, ಬೆಂಕಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಪಾಲಿಸಬೇಕು ಎಂದು ರಾಮನಗರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಮೋಹನ ಮುದಿಗೌಡ ಹೇಳಿದರು.

ಅಗ್ನಿಶಾಮಕ ಸೇವಾ ಸಪ್ತಾಹ –2026 ಪ್ರಯುಕ್ತ ತಾಲ್ಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಣ್ಣ ನಿರ್ಲಕ್ಷ್ಯವೂ ದೊಡ್ಡ ಅನಾಹುತಗಳಿಗೆ ಕಾರಣವಾಗುತ್ತದೆ. ಘಟನೆ ಸಂಭವಿಸಿದ ಬಳಿಕ ಕೊರಗುವ ಬದಲು ಮುನ್ನೆಚ್ಚರಿಕೆ ಕ್ರಮಗಳನ್ನು ಅರಿತು, ಅದರಂತೆ ನಡೆಯಬೇಕು ಎಂದರು.

ಏ.14ರಿಂದ 20ರವರೆಗೆ ನಡೆದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲ್ಲೂಕಿನ ಬಿಡದಿ ಕೈಗಾರಿಕಾ ಪ್ರದೇಶ, ಶಾಲಾ–ಕಾಲೇಜು, ಆಸ್ಪತ್ರೆ, ವಾಣಿಜ್ಯ ಸಂಕೀರ್ಣ, ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ವಸತಿ ಸಂಕೀರ್ಣಗಳು ಸೇರಿದಂತೆ ಸುಮಾರು 60 ಸ್ಥಳಗಳಲ್ಲಿ ಅಗ್ನಿ ಸುರಕ್ಷತೆ ಕುರಿತು ಉಪನ್ಯಾಸ, ಜಾಗೃತಿ ಹಾಗೂ ಅಣಕು ಪ್ರದರ್ಶನ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-14-1973230827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.