ಕನಕಪುರ (ರಾಮನಗರ): ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿ ತನ್ನ ಕಾರ್ಪೊರೇಟ್ ಪರಿಸರ ಜವಾಬ್ದಾರಿ (ಸಿಇಆರ್) ಉಪಕ್ರಮದಡಿ ಜಿಲ್ಲೆಯ ರಾಮನಗರ ವಿಭಾಗಕ್ಕೆ ಎರಡು ವಿಶೇಷ ಸುಸಜ್ಜಿತ ವಾಹನಗಳನ್ನು ಕೊಡುಗೆಯಾಗಿ ನೀಡಿದೆ.

ಕೆಡಿಪಿ ಸಭೆ ಸಲುವಾಗಿ ಪಟ್ಟಣದಲ್ಲಿ ಇತ್ತೀಚೆಗೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಾಹನಗಳನ್ನು ಹಸ್ತಾಂತರ ಮಾಡಿದರು.

ಟಿಕೆಎಂ ಕಂಪನಿ ತನ್ನ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿದೆ. ಈಗ ಕೊಟ್ಟಿರುವ ವಾಹನಗಳು ಕಾಳ್ಗಿಚ್ಚು, ಆನೆ ಕಾರ್ಯಾಚರಣೆ ಸೇರಿದಂತೆ ವಿವಿಧ ಕಾರ್ಯಗಳಿಗೆ ಉಪಯುಕ್ತವಾಗಿವೆ ಎಂದು ಶಿವಕುಮಾರ್ ಹೇಳಿದರು.

ನೈಸರ್ಗಿಕ ಸಂಪತ್ತುಗಳು ಹಾಗೂ ವನ್ಯಜೀವಿಗಳ ರಕ್ಷಣೆಗೆ ಪೂರಕವಾಗಿ ಅರಣ್ಯ ಇಲಾಖೆಗೆ ವಾಹನಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಇದರೊಂದಿಗೆ ಕಂಪನಿಯು ದೀರ್ಘಕಾಲೀನ ಸಕಾರಾತ್ಮಕ ಪರಿಸರ ಪರಿಣಾಮ ಸೃಷ್ಟಿಸಲು ಕಂಪನಿ ಮುಂದುವರಿಸುತ್ತಿದೆ ಎಂದು ಟಿಕೆಎಂ ಮುಖ್ಯ ಸಂವಹನ ಅಧಿಕಾರಿ ಹಾಗೂ ಹಿರಿಯ ಯೋಜನಾ ಉಪಾಧ್ಯಕ್ಷ ಸುದೀಪ್ ದಳವಿ ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ರಾಮಕೃಷ್ಣಪ್ಪ, ಆರ್ಎಫ್ಒ ರವಿ, ಎಸಿಎಫ್ಗಳಾದ ಚೈತ್ರ, ನಾಗೇಂದ್ರ, ಟಿಕೆಎಂ ಅಧಿಕಾರಿಗಳು ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-1260694874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.