ಕುದೂರು: ದೇಶದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆ ಸಂಕೇತವಾದ ಕೈಮಗ್ಗ ಗ್ರಾಮೀಣ ಹಾಗೂ ಅರೆ ಗ್ರಾಮೀಣ ಭಾಗಗಳಲ್ಲಿ ಜೀವನೋಪಾಯ ಒದಗಿಸುವ ಪ್ರಮುಖ ಕ್ಷೇತ್ರವಾಗಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ತುರಗಪುರಿ ನೇಕಾರ ಉತ್ಪಾದಕರ ಕಂಪನಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಯೋಜನೆಗಳ ಕಾರ್ಯಕ್ರಮ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭ ಸಿಕ್ಕಾಗ ಮಾತ್ರ ಸರ್ಕಾರದ ಯೋಜನೆ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.
ರಾಮನಗರ ಜಿಲ್ಲೆ ಜವಳಿ ಇಲಾಖೆ ಸಹಾಯಕ ನಿರ್ದೇಶಕರಾದ ಆಶಾ, ತುರಗಪುರಿ ನೇಕಾರ ಉತ್ಪಾದಕ ಕಂಪನಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಸೋಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಕೆ.ಬಿ.ಬಾಲರಾಜು, ಸದಸ್ಯರಾದ ಹನುಮಂತರಾಯಪ್ಪ, ಜಯರಾಮ್, ಮುಖಂಡರು, ಪಟ್ಟಣದ ನೇಕಾರರು ಹಾಗೂ ಇತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.