ರಾಮನಗರ: 2026-27ನೇ ಸಾಲಿನ ಎಸ್ಎಫ್ಸಿ ಹಾಗೂ ನಗರಸಭೆ ನಿಧಿಯ ಅನುಮೋದಿತ ಕ್ರಿಯಾ ಯೋಜನೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಇತರ ಬಡಜನರ ಕಲ್ಯಾಣ ಹಾಗೂ ಅಂಗವಿಕಲ ಕಾರ್ಯಕ್ರಮದಡಿ ವ್ಯಕ್ತಿ ಸಂಬಂಧಿತ ಕಾರ್ಯಕ್ರಮಕ್ಕೆ ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ನೆರವು, ಪ್ರೋತ್ಸಾಹಧನ, ಶಿಷ್ಯ ವೇತನ ನೀಡಲಾಗುತ್ತದೆ. ಬಿ.ಇ, ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಪರಿಶಿಷ್ಟ ಪಂಗಡದ 5ರಿಂದ 20 ವರ್ಷದೊಳಗಿನ ಯುವತಿಯರಿಗೆ ಜೀವವಿಮೆ ವಂತಿಕೆ, ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ನೆರವು, ಪ್ರೋತ್ಸಾಹಧನ, ಶಿಷ್ಯ ವೇತನ ನೀಡಲಾಗುತ್ತದೆ.

ಶೇ 7.25 ಯೋಜನೆಯಡಿ ಇತರೆ ಹಿಂದುಳಿದ ವರ್ಗದ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ನೆರವು, ಪ್ರೋತ್ಸಾಹ ಧನ, ಶಿಷ್ಯ ವೇತನ, ಅಂಗವಿಕಲರಿಗೆ ಜೀವ ವಿಮೆ ವಂತಿಕೆ ನೀಡಲಾಗುವುದು. ಈ ಸೌಲಭ್ಯ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದು.

ಅರ್ಹರು ಚನ್ನಪಟ್ಟಣ ನಗರಸಭೆ ಕಾರ್ಯಾಲಯದ ಕಚೇರಿಯಿಂದ ಅರ್ಜಿ ಪಡೆದು ನಿಗದಿತ ದಾಖಲಾತಿಗಳೊಂದಿಗೆ ಮೇ 31ರ ಸಂಜೆ 5ರೊಳಗೆ ಅರ್ಜಿ ಸಲ್ಲಿಸಬೇಕು. ನಿಗದಿಪಡಿಸಿರುವ ಅನುದಾನದ ಲಭ್ಯತೆ ಇರುವವರು ಮಾತ್ರ ಸಂಬಂಧಿಸಿದ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯೊಂದಿಗೆ ಸಲ್ಲಿಸುವ ಪ್ರತಿಯೊಂದು ನಕಲು ಪ್ರತಿಯನ್ನು ಗೆಜೆಟೆಡ್ ಅಧಿಕಾರಿ ಅಥವಾ ನೋಟರಿ ಅವರಿಂದ ದೃಢೀಕರಿಸಿ ಸಲ್ಲಿಸಬೇಕು.

ಮಾಹಿತಿಗೆ ಚನ್ನಪಟ್ಟಣ ನಗರಸಭೆಯ ಯೋಜನಾ ಶಾಖೆ ಅಥವಾ ವೆಬ್ಸೈಟ್ www.channapatnacity.mrc.gov.in ಸಂಪರ್ಕಿಸಬೇಕು ಎಂದು ನಗರಸಭೆಯ ಪೌರಾಯುಕ್ತ ಮಹೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-14-696454332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.