ರಾಮನಗರ: ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ತಮ್ಮ ಬೇಡಿಕೆಗಳ ಕುರಿತು ಫಲಕಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು. ಸಂಘದ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್, ‘ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ್, ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ ಹಾಗೂ ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನವನ್ನು ಪರಿಗಣಿಸಿ ಇನಕ್ರಿಮೆಂಟ್ ಕೊಡಬೇಕು’ ಎಂದು ಒತ್ತಾಯಿಸಿದರು.

‘ನೌಕರರು ನಿವೃತ್ತಿ ಅಥವಾ ನಿಧನರಾದರೆ ₹6 ಲಕ್ಷ ಇಡುಗಂಟು ಕೊಡಬೇಕು. ಪಂಚಾಯಿತಯಲ್ಲಿ ಠರಾವು ಮೂಲಕ ನೇಮಕವಾಗುವ ಸಿಬ್ಬಂದಿಗೆ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಆಗದಿದ್ದರೂ, ಅವರಿಗೆ ಇಡುಗಂಟು ನೀಡಲು ಆದೇಶ ನೀಡಬೇಕು. ಇತ್ಯರ್ಥವಾಗದ ಬೇಡಿಕೆಗಳ ಕುರಿತು ಸಚಿವರ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ತರಬೇತಿ ಪಡೆದಿರುವ ಎಲ್ಲಾ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಡಂಬಡಿಕೆ ಪತ್ರ ಮತ್ತು ಪ್ರತಿ ವರ್ಷದ ನವೀಕರಣ ಪದ್ದತಿ ರದ್ದುಪಡಿಸಬೇಕು. 15ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು. ಪ್ರತಿ ಪಂಚಾಯತಿಗೆ ಒಬ್ಬರನ್ನು ಮಾತ್ರ ಚಾಲಕರೆಂದು ಪರಿಗಣಿಸಿ ₹15 ಸಾವಿರ ವೇತನ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.

‘ಗ್ರೇಡ್-1 ಕಾರ್ಯದರ್ಶಿಗಳಾದ ಪಿಡಿಒ ಹುದ್ದೆಗೆ ರಾಜ್ಯಮಟ್ಟದಲ್ಲಿ ಕೊಡುವ ಮುಂಬಡ್ತಿಯನ್ನು ಕೈಬಿಟ್ಟು, ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಪ್ರತಿ ಪಂಚಾಯಿತಿಗೆ ಲೆಕ್ಕ ಸೃಷ್ಟಿಸಬೇಕು. ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ವೃಂದದಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕವಾದವರಿಗೆ ಕೆಸಿಎಸ್ಆರ್–325 ನಿಯಮಾನುಸಾರ ಹಿಂದಿನ ಸೇವೆ ಪರಿಗಣಿಸಿ ಹಳೆ ಪಿಂಚಣಿ ಮಾಡಬೇಕು. ಗ್ರೇಡ್-1 ಪಂಚಾಯಿತಿಗಳನ್ನು ಜನಸಂಖ್ಯೆ ಆಧರಿಸಿ ಮೇಲ್ದರ್ಜೆಗೇರಿಸಬೇಕು’ ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಂಘದಿಂದ ಮನವಿ ಸಲ್ಲಿಸಲಾಯಿತು. ಸಂಘದ ಪದಾಧಿಕಾರಿಗಳಾದ ಜಯಲಿಂಗು, ನಂದಕುಮಾರ್, ಜೈಶಂಕರ್, ಯೋಗಲಿಂಗ , ಸುರೇಶ್, ರಾಜೇಶ್, ನಾಗರಾಜು, ಪರಶಿವ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-14-1237291887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.