ರಾಮನಗರ: ಹತ್ತು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಅನುಮೋದನೆ ನೀಡಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯ (ಜಿಬಿಐಟಿ) ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲು ಕ್ಷಣಗಣನೆ ಆರಂಭವಾಗಿದೆ. ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಸಮರೋಪಾದಿಯಲ್ಲಿ ಅದಕ್ಕೆ ತಯಾರಿ ಮಾಡಿಕೊಳ್ಳುತ್ತಿದೆ.

ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಬೆಂಗಳೂರು ಸಮಗ್ರ ಉಪನಗರ ಯೋಜನೆಯಡಿ ₹18,133 ಕೋಟಿ ವೆಚ್ಚದಲ್ಲಿ ‘ಎಐ ಸಿಟಿ’ ಅಥವಾ ‘ವರ್ಕ್–ಲಿವ್–ಪ್ಲೇ’ ಎಂಬ ಉಪ ನಗರ ತಲೆ ಎತ್ತಲಿದೆ. ದಿನದಿಂದ ದಿನಕ್ಕೆ ಬೆಳೆಯುತ್ತಿರುವ ರಾಜಧಾನಿ ಬೆಂಗಳೂರನ್ನು ದಕ್ಷಿಣ ಭಾಗದಲ್ಲಿ ವಿಸ್ತರಿಸುವ ನಿಟ್ಟಿನಲ್ಲಿ ವಿಶ್ವದರ್ಜೆಯ ಈ ಉಪನಗರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

7,481 ಎಕರೆ ಸ್ವಾಧೀನ: ‘ಮಹತ್ವಕಾಂಕ್ಷಿ ಉಪನಗರ ನಿರ್ಮಾಣ ಯೋಜನೆಗಾಗಿ ಬಿಡದಿ ಹೋಬಳಿಯ ವ್ಯಾಪ್ತಿಯ 9 ಗ್ರಾಮಗಳ ಒಟ್ಟು 7,481 ಎಕರೆ 22 ಗುಂಟೆ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಗುರುತಿಸಲಾಗಿದೆ’ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್. ನಟರಾಜ್ ಗಾಣಕಲ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ಭೂ ಮಾಲೀಕರಿಗೆ 2013ರ ಭೂ ಸ್ವಾಧೀನ, ಪುನರ್ವಸತಿ ಕಾಯ್ದೆ ಪ್ರಕಾರ ನಗದು ಪರಿಹಾರ ಅಥವಾ ಕರ್ನಾಟಕ ನಗರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ– 2009ರ ಪ್ರಕಾರ ಅಭಿವೃದ್ಧಿಪಡಿಸಿದ ನಿವೇಶನವನ್ನು ಪರಿಹಾರವಾಗಿ ನೀಡಲಾಗುವುದು’ ಎಂದು ಹೇಳಿದರು.

ಟೆಂಡರ್ಗೆ ಸಿದ್ದತೆ: ‘ಉಪನಗರ ನಿರ್ಮಾಣಕ್ಕೆ ಯೋಜನೆ ರೂಪಿಸಲು ಅಂತರರಾಷ್ಟ್ರೀಯ ಮಟ್ಟದ ಯೋಜನಾ ನಿರ್ವಹಣಾ ಸಲಹೆಗಾರ ಸಂಸ್ಥೆಯನ್ನು ಟೆಂಡರ್ ಮೂಲಕ ಆಯ್ಕೆ ಮಾಡಲು ಸರ್ಕಾರದ ಸಮ್ಮತಿ ಸಿಕ್ಕಿದೆ. ಯೋಜನೆಯು ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ವೇಗ ನೀಡಲಿದೆ. ಮುಂದಿನ ದಿನಗಳಲ್ಲಿ ನಗರದ ಮೂಲಸೌಕರ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ’ ಎಂದು ನಟರಾಜ್ ತಿಳಿಸಿದರು.

‘ನನೆಗುದಿಗೆ ಬಿದ್ದಿದ್ದ ಯೋಜನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮರುಜೀವ ನೀಡಿ ಈ ಮಟ್ಟಕ್ಕೆ ತಂದಿದ್ದಾರೆ. ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ಸ್ಥಳೀಯ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಶ್ರಮವೂ ಇದರ ಹಿಂದೆ ಇದೆ. ಉಪನಗರದಿಂದಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯ ಅಭಿವೃದ್ಧಿಗೆ ಹೊಸ ಸ್ಪರ್ಶ ಮತ್ತು ವೇಗ ಸಿಗಲಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-14-1180593607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.