ರಾಮನಗರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಕಳೆದ ಎರಡೂವರೆ ವರ್ಷದಲ್ಲಿ 12,719 ಮಹಿಳೆಯರ ಹೆಸರನ್ನು ಕೈ ಬಿಡಲಾಗಿದೆ. ಮಹಿಳೆಯರಿಗೆ ಪ್ರತಿ ತಿಂಗಳು ₹2 ಸಾವಿರ ಪಾವತಿಸುವ ಯೋಜನೆ ಇದಾಗಿದೆ.

ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅರ್ಹರಿಗೆ ಮಾತ್ರ ಯೋಜನೆಯ ಸೌಲಭ್ಯ ಸಿಗಬೇಕೆಂದು, ಆಗಾಗ ‘ಗೃಹಲಕ್ಷ್ಮಿ’ಯರ ಪಟ್ಟಿಯನ್ನು ಪರಿಷ್ಕರಿಸುತ್ತಾ ಬಂದಿದೆ. ಯೋಜನೆಗೆ ನಿಗದಿಪಡಿಸಿರುವ ಮಾನದಂಡಗಳಿಗೆ ಹೊರತಾಗಿರುವವರನ್ನು ಪಟ್ಟಿಯಿಂದ ಕೈ ಬಿಡುತ್ತಿದೆ.

ಮೂರು ಕಾರಣ: ಇಷ್ಟು ಮಂದಿ ಪಟ್ಟಿಯಿಂದ ಹೊರಗುಳಿಯಲು ಮುಖ್ಯವಾಗಿ ಮೂರು ಕಾರಣಗಳಿವೆ. ‘ಗೃಹಲಕ್ಷ್ಮಿ’ಗೆ ಅರ್ಹರಾಗಿದ್ದರೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡದಿರುವುದು ಮೊದಲ ಕಾರಣ. ಸ್ವತಃ ಫಲಾನುಭವಿ ಆದಾಯ ತೆರಿಗೆ (ಐ.ಟಿ) ಮತ್ತು ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಪಾವತಿಸುತ್ತಿರುವುದು ಎರಡನೇ ಕಾರಣವಾದರೆ, ಫಲಾನುಭವಿ ಮೃತಪಟ್ಟಿರುವುದು ಮೂರನೇ ಕಾರಣ.

‘ಫಲಾನುಭವಿಗಳ ಪೈಕಿ ಮೃತಪಟ್ಟಿರುವವರ ಸಂಖ್ಯೆ ಕನಕಪುರದಲ್ಲೇ ಹೆಚ್ಚು. ಕಳೆದ ಮೂರು ವರ್ಷದಲ್ಲಿ ಈ ತಾಲ್ಲೂಕಿನಲ್ಲಿ 3,058 ಮಂದಿ ಕೊನೆಯುಸಿರೆಳೆದಿದ್ದಾರೆ. ಮಾಗಡಿಯಲ್ಲಿ ಅತಿ ಕಡಿಮೆ 1,375 ಮಂದಿ ಮೃತಪಟ್ಟಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ದಿನೇಶ್ ಜೆ.ಆರ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಐ.ಟಿ–ಜಿಎಸ್ಟಿ ಪಾವತಿ ಕಾರಣಕ್ಕೆ ಪಟ್ಟಿಯಿಂದ ಹೊರಗುಳಿದಿರುವ ಫಲಾನುಭವಿಗಳ ಪೈಕಿ ರಾಮನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು 1,746 ಮಹಿಳೆಯರಿದ್ದಾರೆ. ಮಾಗಡಿಯಲ್ಲಿ ಕನಿಷ್ಠ 587 ಮಂದಿ ಇದ್ದಾರೆ. ಉಳಿದಂತೆ ಚನ್ನಪಟ್ಟಣದಲ್ಲಿ 1,208 ಹಾಗೂ ಕನಕಪುರದಲ್ಲಿ 1,259 ಮಹಿಳೆಯರಿದ್ದಾರೆ’ ಎಂದು ಹೇಳಿದರು.

‘ಗೃಹಲಕ್ಷ್ಮಿ ಸೌಲಭ್ಯಕ್ಕೆ ಅರ್ಹರಿದ್ದರೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡದ ಮಹಿಳೆಯರಲ್ಲಿ ಕನಕಪುರ ತಾಲ್ಲೂಕಿನಲ್ಲಿ 372 ಮಂದಿ ಇದ್ದಾರೆ. ಉಳಿದಂತೆ ರಾಮನಗರದಲ್ಲಿ 353, ಚನ್ನಪಟ್ಟಣ 301 ಹಾಗೂ ಮಾಗಡಿಯಲ್ಲಿ 269 ಮಹಿಳೆಯರಿದ್ದಾರೆ. ಆಧಾರ್ ಸೀಡಿಂಗ್ ಮಾಡಿಸುವಂತೆ ಇವರಿಗೆ ಜಾಗೃತಿ ಮೂಡಿಸಲಾಗಿದೆ’ ಎಂದು ತಿಳಿಸಿದರು.

ಕಾರ್ಯಕರ್ತರಿಂದ ಮಾಹಿತಿ: ಮೃತ ಫಲಾನುಭವಿಗಳ ಮಾಹಿತಿಯನ್ನು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಸಂಗ್ರಹಿಸಿ ನೀಡುತ್ತಾರೆ. ಜೊತೆಗೆ ಇಲಾಖೆಯ ಕೇಂದ್ರ ಕಚೇರಿಯಿಂದಲೂ ಮರಣ ಪ್ರಮಾಣಪತ್ರ ಮಾಹಿತಿ ಆಧರಿಸಿ ನಮಗೆ ಮೃತರ ಮಾಹಿತಿ ಕಳಿಸುತ್ತಾರೆ. ಅಂತಹ ಹೆಸರುಗಳನ್ನು ಸ್ಥಳೀಯವಾಗಿ ಸಂಗ್ರಹಿಸಿರುವ ಮಾಹಿತಿ ಜೊತೆಗೆ ತಾಳೆ ನೋಡಿ ಅಂತಿಮವಾಗಿ ಪಟ್ಟಿಯಿಂದ ಹೆಸರು ತೆಗೆಯುತ್ತೇವೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದ್ಯಯ ಅನ್ನ ಯೋಜನೆ (ಎಎವೈ), ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಹಾಗೂ ಎಪಿಎಲ್ (ಬಡತನ ರೇಖೆಗಿಂತ ಮೇಲಿರುವ) ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಹಾಗೂ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ, ಒಬ್ಬರನ್ನು ಮಾತ್ರ ಯೋಜನೆಗೆ ಪರಿಗಣಿಸಲಾಗುತ್ತದೆ.

ಮಹಿಳೆಗೆ ಆರ್ಥಿಕ ಬಲ ತುಂಬಿ ಸ್ವಾವಲಂಬಿಗಳನ್ನಾಗಿ ಮಾಡುವ ಆಶಯದೊಂದಿಗೆ, ರಾಜ್ಯ ಸರ್ಕಾರ ಮಹಿಳೆಯ ಬ್ಯಾಂಕ್ ಖಾತೆಗೆ ₹2 ಸಾವಿರ ಮೊತ್ತವನ್ನು ನೇರ ನಗದು ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು 2023ರ ಜುಲೈನಲ್ಲಿ ಜಾರಿಗೆ ತಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-14-723077870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.