ರಾಮನಗರ: ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿರುವ ಮಹಿಳೆಯರ ಪೈಕಿ 6,624 ಫಲಾನುಭವಿಗಳು ಮೃತಪಟ್ಟಿದ್ದಾರೆ. ಅಂತಹವರ ಹೆಸರನ್ನು ಯೋಜನೆಯಿಂದ ಕೈ ಬಿಡಬೇಕು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದಿನೇಶ್ ಅವರಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಅನಾರೋಗ್ಯ, ಅಪಘಾತ, ವಯೋಸಹಜ ಸಾವು ಸೇರಿದಂತೆ ಇತರ ಕಾರಣಗಳಿಂದಾಗಿ ಯೋಜನೆಯಡಿ ನೋಂದಣಿಯಾಗಿಇರುವ ಫಲಾನುಭವಿಗಳು ಮೃತಪಟ್ಟಿದ್ದಾರೆ’ ಎಂದರು.

‘ಮೃತಪಟ್ಟಿರುವ ಫಲಾನುಭವಿಗಳ ಪೈಕಿ ಈಗಾಗಲೇ 1,777 ಮಂದಿ ಹೆಸರನ್ನು ಯೋಜನೆಯಿಂದ ಕೈಬಿಡಲಾಗಿದೆ. ಬಾಕಿ 4,847 ಮಂದಿ ಹೆಸರನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದು ಹಾಕಬೇಕು. ಆ ಮೂಲಕ, ಮೃತರ ಬ್ಯಾಂಕ್ ಖಾತೆಗೆ ಹಣ ಹೋಗದಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 15,053 ಬಿಪಿಎಲ್ ಪಡಿತರ ಚೀಟಿಗಳ ಪೈಕಿ 12,216 ಪಡಿತರ ಚೀಟಿಗಳನ್ನು ಎಪಿಎಲ್ ಪಡಿತರ ಚೀಟಿಗಳನ್ನಾಗಿ ಪರಿವರ್ತನೆ ಮಾಡಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಶಿಲ್ಪ ಸಭೆಗೆ ಮಾಹಿತಿ ನೀಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ರಾಜು, ‘ಪಡಿತರ ಚೀಟಿಗಳನ್ನು ಪರಿವರ್ತಿಸುವ ಸಂದರ್ಭದಲ್ಲಿ ಅಧಿಕಾರಿಗಳು ಕೂಲಕುಂಷವಾಗಿ ಪರಿಶೀಲಿಸಬೇಕು. ಅರ್ಹ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು’ ಎಂದು ನಿರ್ದೇಶಿಸಿದರು.

‘ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅವಶ್ಯವಿರುವ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಅಧಿಕಾರಿಗಳು ಬಸ್ ಸೌಕರ್ಯ ಕಲ್ಪಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಇಲಾಖೆಗಳು ಶ್ರಮಿಸಬೇಕು. ಈ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ಮಹದೇಶ್, ಎಸ್.ಸಿ. ಶೇಖರ್, ಸಿದ್ದೇಗೌಡ,, ರಾಮನಗರ ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ಮಾಗಡಿ ಅಧ್ಯಕ್ಷ ಶಿವಣ್ಣ, ಜಿಲ್ಲಾ ಸಮಿತಿ ಸದಸ್ಯರಾದ ಶಿವಮಾದಯ್ಯ, ಎಂ. ಮಹದೇವ್, ಕಾಳಮ್ಮ, ವನಜಾ ಎಸ್.ಜಿ, ಶೋಭಾ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-14-1305074435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.